For the best experience, open
https://m.suddione.com
on your mobile browser.
Advertisement

ಹಿಂಗಾರು ಹಂಗಾಮು ಬೆಳೆ ಸಮೀಕ್ಷೆ : ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ರೈತರೇ ಅಪ್‍ಲೋಡ್ ಮಾಡಲು ಸೂಚನೆ

07:04 PM Dec 22, 2023 IST | suddionenews
ಹಿಂಗಾರು ಹಂಗಾಮು ಬೆಳೆ ಸಮೀಕ್ಷೆ   ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ರೈತರೇ ಅಪ್‍ಲೋಡ್ ಮಾಡಲು ಸೂಚನೆ
Advertisement

ಚಿತ್ರದುರ್ಗ. ಡಿ.22:  ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿನ ಹಿಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “Rabi Crop Survey App -2023-24 (ಹಿಂಗಾರು ರೈತರ ಬೆಳೆ ಸಮೀಕ್ಷೆ -2023)” ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿ ಹಾಗೂ ಛಾಯ ಚಿತ್ರವನ್ನು ಅಪ್‍ಲೋಡ್ ಮಾಡಬಹುದಾಗಿದೆ.

Advertisement
Advertisement

ಈ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಪಹಣಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ.

Advertisement

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳು ಅಥವಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಸಹ ಬೆಳೆ ಮಾಹಿತಿಯನ್ನು ದಾಖಲಿಸಬಹುದು.

Advertisement
Advertisement

ಬೆಳೆ ವಿವರಗಳನ್ನು ದಾಖಲು ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುತ್ತೀರಿ. ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ 18004253553 ಗೆ ಕರೆ ಮಾಡಬಹುದು ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ/ರೈತ ಸಂಪರ್ಕ ಕೇಂದ್ರ, ಅಥವಾ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Advertisement
Tags :
Advertisement