For the best experience, open
https://m.suddione.com
on your mobile browser.
Advertisement

ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಯಶಸ್ವಿಯಾಗಲೆಂದು ದೇವರಲ್ಲಿ ಪ್ರಾರ್ಥಿಸಿದ ಅಭಿಮಾನಿಗಳು

06:41 PM Mar 20, 2024 IST | suddionenews
ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಯಶಸ್ವಿಯಾಗಲೆಂದು ದೇವರಲ್ಲಿ ಪ್ರಾರ್ಥಿಸಿದ ಅಭಿಮಾನಿಗಳು
Advertisement

Advertisement
Advertisement

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ದಾಖಲಾಗಿದ್ದು, ನಾಳೆ ಚಿಕಿತ್ಸೆ ನಡೆಯಲಿದೆ. ಈಗಾಗಿ ಅವರ ಅಭಿಮಾನಿಗಳು, ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಹೃದಯದ ಸಮಸ್ಯೆ ಇದೆ. ಈಗಾಗಲೇ ಎರಡು ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದು ಮೂರನೇಯ ಬಾರಿಗೆ ಅಡ್ಮಿಟ್ ಆಗಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳೆಲ್ಲಾ ಬೇಡಿಕೊಂಡಿದ್ದಾರೆ. ಕುಮಾರಸ್ವಾಮಿ ಅವರ ಆರೋಗ್ಯಕ್ಕಾಗಿ ವ ಇಧಾನಪರಿಷತ್ ಸದಸ್ಯ ಟಿ ಎ ಶರವಣ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಲಿ ಎಂದೇ ಬೇಡಿಕೊಂಡಿದ್ದಾರೆ.

Advertisement

Advertisement

'ಕುಮಾರಸ್ವಾಮಿ ಅವರಿಗೆ ನಾಳೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಇದೆ. ತಾಯಿ ಹೃದಯದ ಕುಮಾರಸ್ವಾಮಿ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲಿ. ಮೂರನೇ ಬಾರಿಗೆ ಈ ಚಿಜಿತ್ಸೆ ನಡೆಯುತ್ತಿದೆ. ಅವರಿಗೆ ಉತ್ತಮ ಆರೋಗ್ಯ ನೀಡಲೆಂದೇ ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಲಾಗಿದೆ' ಎಂದು ಟಿ ಎ ಶರವಣ ತಿಳಿಸಿದ್ದಾರೆ‌.

ಲೋಕಸಭಾ ಚುನಾವಣೆಯ ಟೆನ್ಶ‌ನ್ ಕೂಡ ಕುಮಾರಸ್ವಾಮಿ ಅವರಿಗೆ ಇದೆ. ಕಾಂಗ್ರೆಸ್ ಸೋಲಿಸುವ ಸಲುವಾಗಿ ಬಿಜೆಪಿ ಜೊತೆಗೆ ಕೈ ಜೋಡಿಸಿದರು‌. ಆದರೆ ಬಿಜೆಪಿ ಇನ್ನು ಕ್ಷೇತ್ರಗಳನ್ನು ಅಧಿಜೃತ ಮಾಡಿಲ್ಲ. ಜೆಡಿಎಸ್ ಪಕ್ಷಕ್ಕೆ ಇನ್ನು ಗ್ಯಾರಂಟಿ ನೀಡಿಲ್ಲ. ಈಗಾಗಿ ಕಾರ್ಯಕರ್ತರೆಲ್ಲಾ ಆಕ್ರೋಶ ಹೊರ ಹಾಕುತ್ತಿದ್ದಾರೆ.

Tags :
Advertisement