ಕೇಂದ್ರದ ವಿರುದ್ಧ ನಾಳೆ ರೈತ ಸಂಘಟನೆಯ ಪ್ರತಿಭಟನೆ : ಯಾಕೆ ಗೊತ್ತಾ..?
ನವದೆಹಲಿ: ರೈತರ ಬೇಡಿಕೆಗಳನ್ನು ಈಡೇರಿಸದೆ ಇರುವ ಕೇಂದ್ರ ಸರ್ಕಾರದ ವಿರುದ್ಧ ನಾಳೆ ರೈತ ಸಂಘಟನೆಗಳು ಪ್ರತಿಭಟನೆ ಗೆ ಮುಂದಾಗಿವೆ. ದೆಹಲಿಯ ಗಡಿಗಳಲ್ಲಿ ನಾಳೆ ಪ್ರತುಭಟನೆ ಮಾಡುವುದಾಗಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಇಂದು ಕೇಂದ್ರ ಸಚಿವರ ಜೊತೆಗೆ ಸಭೆ ನಡೆಸಲಾಗುವುದು. ಸಭೆಯ ಬಳಿಕ ನಾಳಿನ ಹೋರಾಟದ ರೂಪುರೇಷೆಗಳು ಘೋಷಣೆಯಾಗಲಿದೆ. ನಾಳಿನ ಪ್ರತಿಭಟನೆಗೆ ಆಗಮಿಸುತ್ತಿಧದ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ 100ಕ್ಕೂ ಹೆಚ್ಚು ರೈತರನ್ನು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ನನ್ನ ಪತ್ನಿ ಸೇರು ಹಲವರಿಗೆ ಗಾಯವಾಗಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಇನ್ನು ಭರವಸೆಗಳನ್ನು ನೀಡಿ ಒಂದು ವರ್ಷವಾಗಿದೆ. ಆದರೂ ಸರ್ಕಾರ ಇನ್ನೂ ಬೇಡಿಕೆಯನ್ನು ಈಡೇರಿಸಿಲ್ಲ. ರೈತರ ಸಾಲ ಮನ್ನಾ, ಪಿಂಚಣಿ, ಬೆಂಬಲ ಬೆಲೆ ಕಾನೂನು ಹಾಗೂ ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ಮನವಿ ಮಾಡಿದ್ದೆವು. ಆದರೆ ಕೇಂದ್ರ ಬಿಜೆಪಿ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.
ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ, ಉತ್ತರ ಪ್ರದೇಶ, ಹರುಯಾ, ಮತ್ತು ಪಂಜಾಬ್ ರಾಜ್ಯಗಳ ರೈತರು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ದೆಹಲಿಗೆ ಯಾತ್ರೆ ಹೊರಡಲು ಸಜ್ಜಾಗಿದ್ದಾರೆ. ಹೀಗಾಗಿ ದೆಹಲಿ ಪೊಲೀಸರು ಗಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಗಡಿಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.