ಮೋದಿ ಜೊತೆಗೆ ಫೈನಲ್ ಮಾತುಕತೆ : ಜೆಡಿಎಸ್ ಎಷ್ಟು ಕ್ಷೇತ್ರದಲ್ಲಿ ಸೀಟು ಭದ್ರಪಡಿಸಿಕೊಳ್ಳಲಿದೆ..?
ನವದೆಹಲಿ: ಲೋಕಸಭಾ ಚುನಾವಣೆಗೆ ಜೆಡಿಎಸ್ - ಬಿಜೆಪಿ ಜೊತೆಗೆ ಮೈತ್ರಿಯನ್ನೇನೋ ಮಾಡಿಕೊಂಡಿದೆ. ಈ ಹಿನ್ನೆಲೆ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಜೆಡಿಎಸ್ ಇಂದು ಕ್ಷೇತ್ರಗಳನ್ನು ಫೈನಲ್ ಮಾಡಿಕೊಂಡಿದೆ ಎನ್ನಲಾಗಿದೆ. ಪ್ರಧಾನಿ ಮೋದಿಯವರ ಜೊತೆಗೆ ಮಾತುಕತೆ ನಡೆಸಿ, ಕ್ಷೇತ್ರಗಳನ್ನು ಫೈನಲ್ ಮಾಡಲಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಬಿಜೆಪಿ 24 ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಲಿದ್ದು, ಇನ್ನು ನಾಲ್ಕು ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಹಾಸನ, ಮಂಡ್ಯ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಜೊತೆಗೆ ಇನ್ನೊಂದು ಕ್ಷೇತ್ರ ಆಯ್ಕೆಯಾಗಿ ನೀಡಿದೆ. ಅದರಲ್ಲಿ ಮೈಸೂರು ಅಥವಾ ತುಮಕೂರಿನಲ್ಲಿ ಸ್ಪರ್ಧೆ ಮಾಡಲು ಒಂದನ್ನ ಆಯ್ಕೆ ಮಾಡಕೊಳ್ಳಬೇಕಿದೆ.
ಇದರ ನಡುವೆ ಮತ್ತೊಂದು ವಿಚಾರ ಚರ್ಚೆಗೆ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರೆ ಎನ್ನಲಾಗುತ್ತಿದೆ. ಬಿಜೆಪಿ ವರಿಷ್ಠರು ಕುಮಾರಸ್ವಾಮಿ ಅವರಿಗೆ ಸಲಹೆಯನ್ನು ನೀಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಸಂಸತ್ತಿಗೆ ಬನ್ನಿ ಎಂದಿದ್ದಾರಂತೆ. ಈ ಮೂಲಕ ಕುಮಾರಸ್ವಾಮಿ ಅವರ ಸ್ಪರ್ಧೆಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಕುಮಾರಸ್ವಾಮಿ, ಇಂದು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.