ಆರೋಗ್ಯದಲ್ಲಿ ಏರುಪೇರು : ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರತರವಾದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಜ್ವರದಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಜಿತ್ಸ ಕೊಡಿಸಲಾಗಿತ್ತು. ಆದರೆ ಇದೀಗ ಮತ್ತೆ ಜಗವರ ಕಾಣಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜ್ವರ ಮತ್ತು ಶೀತದಿಂದ ಬಳಲುತ್ತಿರುವ ಎಸ್ ಎಂ ಕೃಷ್ಣ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರೆಲ್ಲಾ ಎಸ್ ಕೃಷ್ಣ ಅವರು ಆದಷ್ಟು ಬೇಗ ಹುಷಾರಾಗಲಿ ಎಂದು ಹಾರೈಸುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ವೈದ್ಯರು ಕೂಡ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ.
ತೀವ್ರ ಬಿಸಿಲಿನ ವಾತಾವರವಿದೆ. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇದೆ. ಇದರಿಂದಾನು ಸಾಕಷ್ಟು ಜನ ಅನಾರೋಗ್ಯಕ್ಕೆ ಈಡಾಗುತ್ತಿದ್ದಾರೆ. ಬಿಸಿಲಿನ ಬೇಗೆಗೆ ಜ್ವರ, ಶೀತದ ಲಕ್ಷಗಳು ಕೂಡ ಕಾಣಿಸುತ್ತಿವೆ. ಲೋಕಸಭಾ ಚುನಾವಣೆ ಇರುವ ಕಾರಣ ಬಿಜೆಪಿ ನಾಯಕರು ಹಿರಿಯರಾದ ಎಸ್ ಎಂ ಕೃಷ್ಣ ಅವರ ಬಳಿಯೂ ಸಾಕಷ್ಟು ಸಲಹೆ-ಸೂಚನೆಗಳನ್ನು ಪಡರಯುತ್ತಿದ್ದಾರೆ. ಹಿರಿಯರ ಮಾರ್ಗದರ್ಶನದಂತೆ ಚುನಾವಣೆಗೆ ಮುನ್ನಡೆಯುತ್ತಿದ್ದಾರೆ. ಹೀಗಾಗಿ ಎಸ್ ಎಂ ಕೃಷ್ಣ ಅವರು ಆದಷ್ಟು ಬೇಗ ಹುಷಾರಾಗಲಿ ಎಂದೇ ಹಾರೈಸುತ್ತಿದ್ದಾರೆ.