ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನ : ದಯಾನಂದಪುರಿ ಸ್ವಾಮೀಜಿ ಸಂತಾಪ
09:58 AM Dec 10, 2024 IST | suddionenews
Advertisement
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.10 : ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ದೇವಾಂಗ ಸಮಾಜದ ಪೀಠಾಧಿಪತಿ ಶ್ರೀ ದಯಾನಂದಪುರಿ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನೇಕಾರರ ಸಮುದಾಯಗಳಿಗೆ ವಿದ್ಯುತ್ ರಿಯಾಯಿತಿ, ಸಾಲ ಸೌಲಭ್ಯಗಳು ಸೇರಿದಂತೆ ಹಲವಾರು ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿಯಾಗುವ ಜೊತೆಗೆ ನೇಕಾರರ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದಾರೆ. ಶಿಸ್ತುಬದ್ಧ ಜೀವನ, ಸಜ್ಜನಿಕೆ ನಡವಳಿಗೆ ರಾಜಕಾರಣಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಶ್ರೀ ದಯಾನಂಪುರಿ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.
Advertisement