For the best experience, open
https://m.suddione.com
on your mobile browser.
Advertisement

ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ..!

12:03 PM Mar 09, 2024 IST | suddionenews
ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ
Advertisement

ಮೈಸೂರು: ಅನಾರೋಗ್ಯದಿಂದ ಮಾಜಿ ಶಾಸಕ ವಾಸು ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ವಾಸು ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ವಾಸು ಅವರು ಮೇಯರ್ ವಾಸು ಎಂದೇ ಖ್ಯಾತಿ ಪಡೆದಿದ್ದರು. ವಾಸು ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ತುಂಬಲಿ ಎಂದು ಸಂಸದ ಪ್ರತಾಪ್ ಸಿಂಹ ಬೇಡಿಕೊಂಡಿದ್ದಾರೆ.

Advertisement

2013ರಲ್ಲಿ ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಐದು ವರ್ಷಗಳ ಅವಧಿಯಲ್ಲಿ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸವನ್ನು‌ ಮಾಡಿದ್ದಾರೆ. ಮುಂದೆ ವಾಸು ಅವರು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2018ರಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಸೋಲು ಕಂಡಿದ್ದರು. 2023ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಕೈ ತಪ್ಪಿತ್ತು. ವಾಸು ಅವರ ಮಗ ಕವೀಶ್ ಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಆದರೆ ಸೋಲು ಕಂಡಿದ್ದರು.

ಇನ್ನು ವಾಸು ಅವರು ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮಹಾರಾಣಿ ಕಾಲೇಜಿನ ನೂತನ ಕಟ್ಟಡ ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ, ಜಿಲ್ಲಾಸ್ಪತ್ರೆ ಮಂಜೂರು, ಕುಕ್ಕರಹಳ್ಳಿ ಕೆರೆಯ ಪರಿಸರ ಅಭಿವೃದ್ಧಿ ಹಾಗೂ ನಗರದ ಸಾತಗಳ್ಳಿ ಬಳಿ ವಿದ್ಯಾವಿಕಾಸ ಎಂಜಿನಿಯರಿಂಗ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದವರು ಇವರು. ಅನಾರೋಗ್ಯದ ಕಾರಣ ಇಂದು ಕುಟುಂಬಸ್ಥರು, ಆಪ್ತರನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Tags :
Advertisement