ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!
ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ ಹೋದ ಜನ ಪರದಾಡುವಂತೆ ಆಗಿದೆ. ನಾಳೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ದಕ್ಷಿಣ ಒಳನಾಡಿನಲ್ಲಿ ವಾಡಿಕೆಯಂತೆ ಮಳೆ ಶುರುವಾಗಿದೆ. ಮೇ 11 ರಿಂದ 17ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಸಹ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಗಾಳಿ, ಗುಡುಗು ಸಹಿತ ಮಳೆ ಬೀಳಲಿದೆ ಎಂದು ಎಚ್ಚರಿಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಈಗಾಗಲೇ ತುಮಕೂರು, ಶಿವಮೊಗ್ಗ, ಯಾದಗಿರಿ, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಘಾಟ್ಗಳಲ್ಲಿ ಹಾಗೂ ಚಿಕ್ಕಮಗಳೂರಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ.