ರಾಜ್ಯದ ರೈತರಿಗೆ ಸಿಹಿ ಸುದ್ದಿ.. ಉದ್ದು ಮತ್ತು ಸೋಯಾಬಿನ್ ಖರೀದಿಸಲು ಮುಂದಾದ ಕೇಂದ್ರ..!
ಬೆಂಗಳೂರು: ಗೌರಿ ಗಣೇಶ ಹಬ್ಬ ಹತ್ತಿರ ಬರ್ತಾ ಇದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಹಾಗೂ ಉದ್ದು ಬೆಳೆಯನ್ನು ಖರೀದಿ ಮಾಡುವಂತೆ ಸೂಚನೆ ನೀಡಿದೆ. ಈ ಸಂಬಂಧ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದಷ್ಟೇ ಸೂರ್ಯಕಾಂತಿ ಹಾಗೂ ಹೆಸರು ಬೇಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವಂತೆ ಸೂಚನೆ ನೀಡಿತ್ತು.
ಕರ್ನಾಟಕದ2024-25ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬಿನ್ ಖರೀದಿಗೆ ಕೃಷಿ ಸಚಿವಾಲಯವೂ ಅನುಮತಿ ನೀಡಿದೆ. ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವ ಕಾರಣ MSO ಅಡಿಯಲ್ಲಿ ಉದ್ದು ಮತ್ತು ಸೋಯಾಬೀನ್ ಗಳಿಗೆ ಪ್ರತಿ ಕ್ವಿಂಟಾಲ್ ಗೆ 7,400 ರೂಪಾಯಿ ಮತ್ತು 4,892 ರೂಪಾಯಿ ಮೌಲ್ಯದಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ರಾಜ್ಯದ ರೈತರು ಬೆಳೆದ 19,760 ಮೆಟ್ರಿಕ್ ಟನ್ ಉದ್ದಿನ ಬೇಳೆ ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಬೆಳೆಗಳನ್ನು ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಮಾಡಿದೆ. ಕರ್ನಾಟಕ ಸರ್ಕಾರ ತಕ್ಷಣವೇ ರಾಜ್ಯಾದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸಿ, ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಉದ್ದು ಮತ್ತು ಸೋಯಾಬಿನ್ ಖರೀದಿಸುವಂತೆ ತಿಳಿಸಲಾಗಿದೆ. ಉದ್ದಿನಕಾಳು 7400 ರೂಪಾಯಿ ಮತ್ತು 4892 ರೂಪಾಯಿ ಬೆಂಬಲ ಬೆಲೆಯನ್ನು ನಿಗದಿ ಮಾಡಲಾಗಿದೆ.