ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ವಿದ್ಯುತ್ ದರ ಯುನಿಟ್ ಗೆ 1 ರೂ. ಇಳಿಕೆ
ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದೆ. ಆದರೆ ಸರ್ಕಾರ ಅನುಮತಿ ನೀಡಿರುವ ಉಚಿತ ವಿದ್ಯುತ್ ಗಿಂತ ಹಡಚ್ಚಿನ ಯುನಿಟ್ ಬಳಸುವವರಿಗೆ ಮಾತ್ರ ಉಚಿತ ಭಾಗ್ಯ ಸಿಕ್ಕಿಲ್ಲ. ಇನ್ನು ವಾಣಿಜ್ಯ ಉದ್ದಿಮೆದಾರರಿಗೂ ಉಚಿತ ಭಾಗ್ಯ ಸಿಕ್ಕಿಲ್ಲ. ಇದೀಗ ವಿದ್ಯುತ್ ಬಿಲ್ ಪಾವತಿ ಮಾಡುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಸರಾಸರಿ 100 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗರ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 1 ರೂಪಾಯಿ 10 ಪೈಸೆಯಂತೆ ಇಳಿಕೆ ಮಾಡಲು ಆದೇಶ ನೀಡಿದೆ. ಅಷ್ಟೇ ಅಲ್ಲ ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ ಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಈ ಮೂಲಕ ವಾಣಿಜ್ಯ ಬಳಕೆದಾರರಿಗೂ ಬಿಗ್ ರಿಲೀಫ್ ನೀಡಿದೆ. ಜೊತೆಗೆ ಶಿಕ್ಷಣ ಮತ್ತು ಆಸ್ಪತ್ರೆಗಳಿಗೆ ಯೂನಿಟ್ ಗೆ 20 ಪೈಸೆ, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಕಡಿತ ಮಾಡಲಾಗಿದೆ.
ಇನ್ನು ರಾಜ್ಯ ಸರ್ಕಾರ ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಈ ಪರಿಷ್ಕೃತ ದರ ಇದೇ ಮಾರ್ಚ್ 1ರಿಂದ ಅನ್ವಯವಾಗಲಿದೆ. 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ಅದಕ್ಕಿಂತ ಕಡಿಮೆ ಯೂನಿಟ್ ಬಳಕೆ ಮಾಡುವವರು ರಿಯಾಯಿತಿಗಾಗಿ ಹೆಚ್ಚಿನ ವಿದ್ಯುತ್ ಬಳಕೆ ಮಾಡದೆ, ಜನ ಹಿತಮಿತವಾಗಿ ಬಳಕೆ ಮಾಡುವುದು ಉತ್ತಮ.