Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕಾಂಗ್ರೆಸ್ ಗೂಂಡಾಗಳು ಸಿಟಿ ರವಿ ಮೇಲೆ ಹಲ್ಲೆ‌ ಮಾಡೋಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ : ವಿಜಯೇಂದ್ರ..!

06:39 PM Dec 20, 2024 IST | suddionenews
Advertisement

ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರ ಬಂಧನವನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ಸಿನ ಗೂಂಡಾಗಳು ಸುವರ್ಣ ಸೌಧಕ್ಕೆ ಬಂದು ಸಿಟಿ ರವಿ ಮೇಲೆ ಮಾಡಲು ರಾಜ್ಯದ ಕಾಂಗ್ರೆಸ್ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆಕ್ರೋಶ ಹೊರ ಹಾಕಿದೆ.

Advertisement

 

ರೈತರ ಮೇಲೆ, ಪಂಚಮಸಾಲಿ ಸಮುದಾಯದವರ ಮೇಲೆ ಲಾಠಿ ಪ್ರಹಾರ ನಡೆಸುತ್ತೀರಿ. ಸ್ಪೀಕರ್ ರೂಲಿಂಗ್ ಬದಿಗಿಟ್ಟು, ಸಿಟಿ ರವಿ ಅವರ ಮೇಲೆ ಹಲ್ಲೆ‌ಮಾಡಿಸಿದ್ದು, ಬಳಿಕ ಪೊಲೀಸರ ಮೂಲಕ ಬಂಧಿಸಲಾಗಿದೆ. ಇಡೀ ರಾತ್ರಿ 500 ಕಿಮೀ ಸಯತ್ತಾಡಿಸಿದ್ದಾರೆ. ಬಲವಂತದಿಂದ ವಾಹನದಲ್ಲಿ ಗದಗ, ರಾಮದುರ್ಗ, ಧಾರಾವಾಡ ಮೊದಲಾದ ಕಡೆಗಳಿಗೆ ಕರೆದೊಯ್ದಿದ್ದಾರೆ. ಜನಪ್ರತಿನಿಧಿಗಳ ಮೇಲೆ ಈ ರೀತಿ ದೌರ್ಜನ್ಯ ಮಾಡುವ ಈ ಸರ್ಕಾರದ ನೀತಿಯನ್ನು ಜನರೂ ಪ್ರಶ್ನಿಸುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ಕಗ್ಗೋಲೆ ಮಾಡುವ ಪಕ್ಷ ಕಾಂಗ್ರೆಸ್.

Advertisement

ಒಂದು ಲೋಟ ನೀರನ್ನು ಕೊಟ್ಟಿಲ್ಲ. ಒಂದು ತುತ್ತು ಅನ್ನವನ್ನು ಕೊಟ್ಟಿಲ್ಲ. ಕಾಂಗ್ರೆಸ್ ಒತ್ತಾಯದ ಮೇರೆಗೆ ಪೊಲೀಸ್ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತ ಅಲ್ಲ. ಅಧಿಕಾರದ ದರ್ಪ, ಅಮನಿನಲ್ಲಿ ಮೆರೆಯುವ ನೀವು, ಅಧಿಕಾರದ ಸೊಕ್ಕು, ಮದದಿಂದ ನಮ್ಮ ಮೇಲೆ ಹಲ್ಲೆ ಮಾಡುವ ಕೆಲಸವನ್ನು ಮಾಡುತ್ತಿದ್ದೀರಿ. ಸಿಟಿ ರವಿ ಅವರು ಶಾಸಕರಾಗಿ, ಸಚಿವರಾಗಿ, ಪಕ್ಷದ ಹಿಂದಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಅವರ ಜೊತೆಗೆ ಈ ರೀತಿ ನಡೆದುಕೊಂಡದ್ದು ಸರಿಯಲ್ಲ ಎಂದಿದ್ದಾರೆ. ಇನ್ನು ಸಿಟಿ ರವಿ ಅವರನ್ನು ಬೆಳಗಾವಿಯಿಂದ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ.

Advertisement
Tags :
bengaluruby vijayendrachitradurgaCongressct ravikannadaKannadaNewssuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಕಾಂಗ್ರೆಸ್ಚಿತ್ರದುರ್ಗಬೆಂಗಳೂರುವಿಜಯೇಂದ್ರಸರ್ಕಾರಸಿಟಿ ರವಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article