ಕನ್ನಡಿಗ ರೋಹನ್ ಬೋಪಣ್ಣಗೆ 50 ಲಕ್ಷ ಬಹುಮಾನ ಘೋಷಿಸಿದ ಸಿದ್ದು ಸರ್ಕಾರ
ಬೆಂಗಳೂರು: ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ ರೋಹನ್ ಬೋಪಣ್ಣ. ಅವರ ಸಾಧನೆಯನ್ನು ಗುರುತಿಸಿ, ಸಿಎಂ ಸಿದ್ದರಾಮಯ್ಯ ಅವರು ಇಂದು ಸನ್ಮಾನ ಮಾಡಿದ್ದಾರೆ. ಆಸ್ಟ್ರೇಲಿಯಾ ಓಪನ್ ಪುರುಷರ ಡಬಲ್ಸ್ ಫೈನಲ್ ನಲ್ಲಿ ಕನ್ನಡಿಗ ರೋಹನ್ ಬೋಪಣ್ಣ ವಿಶ್ವ ದಾಖಲೆ ಬರೆದಿದ್ದಾರೆ. ಹೀಗಾಗಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇದೀಗ ಸರ್ಕಾರದಿಂದ ರೋಹನ್ ಅವರನ್ನು ಗೌರವಿಸಿ, ಬಹುಮಾನದ ಚೆಕ್ ಅನ್ನು ವಿತರಣೆ ಮಾಡಿದ್ದಾರೆ.
ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ @rohanbopanna ಅವರನ್ನು ಭೇಟಿಯಾಗಿ ಅಭಿನಂದಿಸಿ, 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದೆ. ಸಚಿವರಾದ @PriyankKharge, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸರ್ಕಾರದಿಂದ ಬಹುಮಾನ ಘೋಷಣೆ ಮಾಡಿದ್ದು, ರೋಹನ್ ಅವರನ್ನು ಗೌರವಿಸಿದೆ. ಶಾಲು ಹೊದಿಸಿ, ಹೂವಿನ ಹಾರ ಹಾಕಿ, ಪೇಟ ಧರಿಸಿ ಸನ್ಮಾನ ಮಾಡಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯರವರ ಜೊತೆಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದು, ಶುಭಕೋರಿದ್ದಾರೆ.