Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣ ಮಾತನ್ನು ಸರ್ಕಾರ ಪರಿಗಣಿಸಬೇಕು : ಶಾಸಕ ಯತ್ನಾಳ್

06:31 PM Nov 30, 2023 IST | suddionenews
Advertisement

ಅಧಿಕಾರಿಗಳ ದಾಳಿಯಲ್ಲಿ ಅಂಬಿಕಾಪತಿ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ 40 ಕೋಟಿ ಹಣ. ಇದೀಗ ಅಂಬಿಕಾಪತಿ ಸಾವಿನ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೀಡಿರುವ ಹೇಳಿಕೆಯನ್ನು ಸರ್ಕಾರ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

Advertisement

ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು. ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು.

ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸಿದ್ದಾರೆ.

Advertisement

Advertisement
Tags :
Ambikapati's deathbangaloreBasanagouda Patil Yatnalbasanagouda yatnalGovernmentKempanna's statementMLA Yatnalshould considerಅಂಬಿಕಾಪತಿ ಸಾವುಕೆಂಪಣ್ಣಬೆಂಗಳೂರುಶಾಸಕ ಯತ್ನಾಳ್ಸರ್ಕಾರ ಪರಿಗಣಿಸಬೇಕು
Advertisement
Next Article