Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚುನಾವಣೆ ಬಳಿಕ ಗೃಹಲಕ್ಷ್ಮೀ ಯೋಜನೆ ರದ್ದು : ದೇವೇಗೌಡರ ಹೇಳಿಕೆಗೆ ಡಿಕೆ ಶಿವಕುಮಾರ್ ಕೊಟ್ರು ಸ್ಪಷ್ಟನೆ..!

03:07 PM Nov 11, 2024 IST | suddionenews
Advertisement

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದರು. ಈ ಉಪಚುನಾವಣೆಯ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳನ್ನು ನಿಲ್ಲಿಸಲಿದೆ. ಜನರು ಜಾಗೃತರಾಗಬೇಕು ಎಂದಿದ್ದರು. ಈ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಷ್ಟೇ ಸಾಫ್ಟ್ ಆಗಿ ಉತ್ತರ ಕೊಟ್ಟಿದ್ದಾರೆ.

Advertisement

ನಮ್ಮ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ‌. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವೂ ಗೃಹಲಕ್ಷ್ಮೀ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಇದಕ್ಕೆ ಜನ ಹುಷಾರಾಗಿರಬೇಕು‌. ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದಾರೆ. ಈ ಬಾರಿಯ ಮೂರು ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲುತ್ತದೆ.

ಬಿಜೆಪಿ ಏನೇ ತಂತ್ರ ಉಪಯೋಗಿಸಿದರು ಜನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದಂತೆ ಈ ಮೂರು ಕ್ಷೇತ್ರಗಳಲ್ಲಿ ಮತ ಹಾಕುತ್ತಾರೆ ಎಂದಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿಯವರ ಆರೋಪದ ಬಗ್ಗೆಯೂ ಮಾತನಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಸುಳ್ಳು ಆರೋಪ. ಅವರನ್ನು ಯಾರೋ ದಾರಿ ತಪ್ಪಸುತ್ತಿದ್ದಾರೆ. ಈ ವಿಚಾರವಾಗಿ ಸಾಬೀತು ಪಡಿಸಿದರೆ, ರಾಜಕೀಯ ತ್ಯಜಿಸುವುದಾಗಿ ಮುಖ್ಯಮಂತ್ರಿಗಳು ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಬೇರೆನು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ. ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

Advertisement

Advertisement
Tags :
bengaluruchitradurgaDevegowdadk shivakumarelectionGruhalakshmikannadaKannadaNewssuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಗೃಹಲಕ್ಷ್ಮೀ ಯೋಜನೆಚಿತ್ರದುರ್ಗಚುನಾವಣೆಡಿಕೆ ಶಿವಕುಮಾರ್ದೇವೇಗೌಡಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article