For the best experience, open
https://m.suddione.com
on your mobile browser.
Advertisement

ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಗೆ 12 ಲಕ್ಷ ದಂಡ..!

02:17 PM Mar 27, 2024 IST | suddionenews
ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಗೆ 12 ಲಕ್ಷ ದಂಡ
Advertisement

IPL 2024: ನಿನ್ನೆ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ ನೀತಿ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಹೀಗಾಗಿ ಶುಭಮನ್ ಗಿಲ್ 12 ಲಜ್ಷ ರೂಪಾಯಿ ಪಾವತಿಸಬೇಕಾಗಿದೆ.

Advertisement

ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ ಗಳನ್ನು 1 ಗಂಟೆ 30 ನಿಮಿಷದಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಂಡರೆ ಬೌಂಡರಿ ಲೈನ್ ನಿಂದ ಒಬ್ಬ ಫೀಲ್ಡರ್ ನನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಅಷ್ಟಕ್ಕೆ ಸರಿ ಮಾಡಿಕೊಳ್ಳದೆ ತಂಡ ಮತ್ತೆ ಎರಡನೇ ಬಾರಿಯೂ ಅದೇ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ದಂಡ ವಿಧಿಸುತ್ತದೆ. ಪ್ಲೇಯಿಂಗ್ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕ 25% ರಷ್ಟು ದಂಡವನ್ನು ವಿಧಿಸಲಾಗುತ್ತದೆ.

Advertisement

ಈ ಮೂಲಕ ನಾಯಕನಾಗಿ ಶುಭಮನ್ ಗಿಲ್ ಸ್ಲೋ ಓವರ್ ರೇಟ್ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗಾಗಿ ದಂಡವನ್ನು ವಿಧಿಸಲಾಗಿದೆ. ಮುಂದಿನ ಪಂದ್ಯದಲ್ಲಿ ಎಚ್ಚರಿಕೆಯನ್ನು ವಹಿಸುವ ಸಾಧ್ಯತೆ ಇರುತ್ತದೆ. ಹೀಗೆ ತಪ್ಪುಗಳು ಮುಮನದುವರೆದರೆ ಗಿಲ್ ಒಂದು ಪಂದ್ಯದಿಂದಾನೇ ಹೊರಗೆ ಉಳಿಯುವ ಸಾಧ್ಯತೆ ಇದೆ.

Tags :
Advertisement