Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪ್ರಕರಣ ರದ್ದು ಕೋರಿ ಹರೀಶ್ ಪೂಂಜಾ ಹೈಕೋರ್ಟ್ ಹೋಗುವ ಸಾಧ್ಯತೆ..!

05:00 PM May 23, 2024 IST | suddionenews
Advertisement

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೆ ಎಫ್ಐಆರ್ ದಾಖಲಾಗಿದ್ದು, ಕರ್ತವ್ಯಕ್ಕೆ ಅಡ್ಡಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಹರೀಶ್ ಪೂಂಜಾ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

Advertisement

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿನ್ನೆ ಹರೀಶ್ ಪೂಂಜಾ ಮನೆಯ ಮುಂದೆ ಹೈಡ್ರಾಮವೇ ನಡೆದಿತ್ತು. ಬಂಧಿಸಲು ಹೋಗಿದ್ದ ಪೊಲೀಸರು ಕೊನೆಗೂ ನೋಟೀಸ್ ನೀಡಿ ವಾಪಾಸ್ ಆಗಿದ್ದರು. ಇಂದು ಬೆಂಗಳೂರಿಗೆ ಬಂದಿರುವ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾನನ್ನು ಬಿಡುಗಡೆ ಮಾಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಹರೀಶ್ ಪೂಂಜಾಗೆ ಇವತ್ತು ಮಧ್ಯಾಹ್ನ 12ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಠಾಣೆ ಇನ್ಸ್‌ಪೆಕ್ಟರ್‌ ನೋಟಿಸ್ ನೀಡಿದ್ದರು. ಆದರೆ ಸಾಧ್ಯವಿಲ್ಲ ಅಂತಾ ಮೌಖಿಕವಾಗಿ ತಿಳಿಸಿ ಬಂದ್ದರು. ಅಷ್ಟೇ ಅಲ್ಲ ದಕ್ಷಿಣ ಕನ್ನಡ ಎಸ್‌ಪಿ ಬಗ್ಗೆ ಮಾತನಾಡಿದ್ದಕ್ಕೆ ಸಮರ್ಥಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಈ ವಿಚಾರವನ್ನ ಇಲ್ಲಿಗೆ ಬಿಡಲ್ಲ ಎಂದು ಹೇಳಿದ್ದರು.

 

Advertisement

ಹರೀಶ್ ಪೂಂಜಾ ಬೆಂಬಲಿಗರು ಮೆಲಂತಬೆಟ್ಟುವಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದರು ಅಂತಾ ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ದಾಳಿ ಮಾಡಿದ್ದರು. ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಮೇ 18 ರಂದು ದೂರು ನೀಡಿದ್ದರು. ಶಾಸಕ ಹರೀಶ್ ಪೂಂಜಾ ಆಪ್ತರಾದ ಪ್ರಮೋದ್ ಉಜಿರೆ ಮತ್ತು ಶಶಿರಾಜ್ ಶೆಟ್ಟಿ ಮೇಲೆ ದೂರು ದಾಖಲಾಗಿತ್ತು‌. ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ, ರೌಡಿಶೀಟರ್ ಆಗಿದ್ದ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು. ಈ ವಿಚಾರ ತಿಳಿದ ಪೂಂಜಾ ಪೊಲೀಸರ ವಿರುದ್ಧ ಕೆಂಡಮಂಡಲರಾಗಿದ್ದರು. ಮದ್ಯರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ್ದರು.

Advertisement
Tags :
High courtಪ್ರಕರಣ ರದ್ದುಹರೀಶ್ ಪೂಂಜಾಹೈಕೋರ್ಟ್
Advertisement
Next Article