For the best experience, open
https://m.suddione.com
on your mobile browser.
Advertisement

ದರ್ಶನ್ ಅಭಿಮಾನಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳು ದೂರು : ಅಂಥದ್ದೇನಾಯ್ತು..?

05:00 PM Jun 21, 2024 IST | suddionenews
ದರ್ಶನ್ ಅಭಿಮಾನಿ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಅಭಿಮಾನಿಗಳು ದೂರು   ಅಂಥದ್ದೇನಾಯ್ತು
Advertisement

Advertisement

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ ಹೋಗಿದ್ದಾರೆ. ಇನ್ನು ಎರಡು ದಿನಗಳ ಕಾಲ ಕಸ್ಟಡಿಯಲ್ಲಿಯೇ ಇರಲಿದ್ದಾರೆ. ಇದರ ಮಧ್ಯೆ ದರ್ಶನ್ ಅಭಿಮಾನಿ ಮೇಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಭಿಮಾನಿಗಳು ದೂರು ನೀಡಿದ್ದಾರೆ.

Advertisement

Advertisement

ಕುಮಾರಸ್ವಾಮಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನವಾಗಿ ಮಾತನಾಡಿದ್ದಾರೆ ಎಂಬ ಹಿನ್ನೆಲೆ ಮಂಗಳಾ ಎಂಬುವವರ ಮೇಲೆ ಜೆಡಿಎಸ್ ಅಭಿಮಾನಿಗಳು ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ವಿಡಿಯೋ ಮಾಡಿದ್ದ ಮಂಗಳಾ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು. ಈ ವಿಡಿಯೋ ಖಂಡಿಸಿರುವ ಕುಮಾರಸ್ವಾಮಿ ಅಭಿಮಾನಿಗಳು ದೂರು ನೀಡಿದ್ದಾರೆ. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಕೀರಾಮ್ ನೇತೃತ್ವದಲ್ಲಿ ದೂರು ನೀಡಲಾಗಿದೆ.

Advertisement
Advertisement

ವಿಡಿಯೋದಲ್ಲಿ, ದರ್ಶನ್ ವಿರುದ್ಧ ಕೊಲೆ ಆರೋಪ ಬರುವಂತೆ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ಧ ಕೂಗಿಸ್ತೀಯಾ. ಸುಮಲತಾ ನಿನಗೆ ಮಂಡ್ಯದಲ್ಲಿ ಸ್ಪರ್ಧೆ ಮಾಡಿರುವುದಕ್ಕೆ ಅವಕಾಶ ಕಿಟ್ಟಿರೋದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕ್ತೀಯ..? ಸುಮಕತಾ ಅವರಿಂದ ಭಿಕ್ಷೆ ಹಾಕಿಸಿಕೊಂಡಿದ್ದೀಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಕುಮಾರಸ್ವಾಮಿ ಅವರಿಗೆ ಬಾಯಿಗೆ ಬಂದ ಹಾಗೇ ಮಾತನಾಡಿ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ನೋಡಿದ ಕುಮಾರಸ್ವಾಮಿ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಂಡ್ಯದಲ್ಲು ಮಂಗಳ ವಿರುದ್ಧ ದೂರು ದಾಖಲಾಗಿದೆ.

ಮಂಗಳ ದರ್ಶನ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ದರ್ಶನ್ ಬೆಂಬಲಿಸುವಂತ ವಿಡಿಯೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ. ಸದ್ಯ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪವಿತ್ರಾ ಜೈಲು ವಾಸಕ್ಕೆ ಹೋಗಿದ್ದಾರೆ. ಅಭಿಮಾನಿಗಳು ದರ್ಶನ್ ತಪ್ಪಿತಸ್ಥ ಅಲ್ಲ ಎಂದು ಪ್ರೂವ್ ಆಗಲಿ ಎಂದೇ ಬಯಸುತ್ತಿದ್ದಾರೆ.

Advertisement
Tags :
Advertisement