ವೇದಿಕೆ ಮೇಲೆ ವಿಡಿಯೋ ಪ್ಲೇ ಮಾಡಿ, ಸಿದ್ದರಾಮಯ್ಯ ಅವರ ಚಡ್ಡಿ ಬಗ್ಗೆ ಮಾತಾಡಿದ ಹೆಚ್.ಡಿ.ಕುಮಾರಸ್ವಾಮಿ
ಮೈಸೂರು: ಮೂಡಾ ಪ್ರಕರಣ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ಮೈಸೂರಿ ಚಲೋ ಹಮ್ಮಿಕೊಂಡಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಸಮಾವೇಶ ನಡೆಸುತ್ತಿದ್ದಾರೆ. ಈ ಸಮಾವೇಶನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾವೂ ಮೈಸೂರು ಚಲೋಗೆ ಚಾಲನೆ ನೀಡಿದ ಬಳಿಕ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮವನ್ನು ಬಿಡದಿಯಿಂದ ಪ್ರಾರಂಭ ಮಾಡಿತು. ಆ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಹಲವಾರು ಪ್ರಶ್ನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಮುಂದೆ ಇಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಮತ್ತು ಯಡಿಯೂರಪ್ಪ ಅವರ ಆಡಳಿತಾವಧಿಯ ಹೇಳಿಕೆಗಳ ವಿಡಿಯೋಗಳನ್ನು ಪ್ರದರ್ಶನ ಮಾಡಿದ್ದಾರೆ. ಅದಕ್ಕೆ ಉತ್ತರಿಸಿ ನಾನು ಮತ್ತು ಯಡಿಯೂರಪ್ಪ ಅವರ ನಡುವೆ ರಾಜಕೀಯ ಸಂಘರ್ಷ ನಡೆದಿರಬಹುದು. ಅದಕ್ಕೆಲ್ಲ ಉತ್ತರ ಕೊಡುವ ನೈತಿಕತೆಯನ್ನು ನಾವಿಬ್ಬರು ಹೊಂದಿದ್ದೇವೆ. ಅದಕ್ಕೂ ಮುಂಚೆ ಕಾಂಗ್ರೆಸ್ ಮಹಾನಾಯಕರ ವಿಡಿಯೋ ಹಾಕಿ ಎಂದು ಕಾಂಗ್ರೆಸ್ ನಾಯಕರ ವಿಡಿಯೋ ಪ್ಲೇ ಮಾಡಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿದ ಹೆಚ್ಡಿಕೆ, ನನ್ನ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರ ಚೆಡ್ಡಿಯೆಲ್ಲಾ ಕಪ್ಪು ಮಾಡಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸೈಟ್ ಪಡೆದರ ಬಗ್ಗೆ ನಾವೂ ಪ್ರಶ್ನೆ ಮಾಡುತ್ತಿದ್ದೇವೆ. ಅರಿಶಿನ ಕುಂಕುಮಕ್ಕೆ ಭೂಮಿ ದಾನ ಮಾಡಿದ್ದು ತಪ್ಪಾ ಎಂದು ಕೇಳುತ್ತಿದ್ದಾರೆ. ಆದ್ರೆ ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡುತ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಟ್ಟಿರುವುದು ಸರ್ಕಾರಿ ಭೂಮಿ. ಸಿಎಂ ಮೂಗಿನ ನೇರಕ್ಕೆ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಎಂದಿದ್ದಾರೆ.