Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು...!

07:05 PM Jul 02, 2024 IST | suddionenews
Advertisement

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಭೋಲೆ ಬಾಬಾರವರ ಸತ್ಸಂಗ ಕಾರ್ಯಕ್ರಮಕ್ಕೆ ಭಕ್ತರು ಒಮ್ಮೆಲೇ ಬಂದಿದ್ದರಿಂದ ನೂಕುನುಗ್ಗಲು ಉಂಟಾಯಿತು. ಕಾಲ್ತುಳಿತದಲ್ಲಿ ಉಸಿರುಗಟ್ಟಿ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. 15 ಮಹಿಳೆಯರು ಮತ್ತು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವರ ಮೃತದೇಹಗಳನ್ನು ಕಂಡು ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆದೇಶಿಸಿ ಸಮಿತಿ ರಚಿಸಲು ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಿಎಂ ಯೋಗಿ ತೀವ್ರ ಸಂತಾಪ ಸೂಚಿಸಿದ್ದಾರೆ.

“ಹತ್ರಾಸ್ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವುದು ತುಂಬಾ ದುಃಖಕರವಾಗಿದೆ. ಇದೊಂದು ಹೃದಯ ವಿದ್ರಾವಕ ಘಟನೆಯಾಗಿದ್ದು,. ಸಂತ್ರಸ್ತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಆದಷ್ಟು ಬೇಗ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಲು ಸೂಚಿಸಿದ್ದೇನೆ. ಈಗಾಗಲೇ ಸಚಿವರಾದ ಲಕ್ಷ್ಮೀನಾರಾಯಣ ಚೌಧರಿ, ಸಂದೀಪ್ ಸಿಂಗ್ ಅಲ್ಲಿಗೆ ತೆರಳಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸಿಎಸ್ , ಡಿಜಿಪಿಗಳಿಗೂ ತೆರಳುವಂತೆ ಆದೇಶಿಸಿದ್ದೇನೆ.ಆಗ್ರಾ ಎಡಿಜಿ ನೇತೃತ್ವದಲ್ಲಿ ತನಿಖೆಗೆ ಆಯೋಗ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ತಿಳಿಸಿದ್ದಾರೆ.

ಇಟಾವಾ ಮುಖ್ಯ ವೈದ್ಯಾಧಿಕಾರಿ ಡಾ.ಉಮೇಶ್ ಕುಮಾರ್ ತ್ರಿಪಾಠಿ ಮಾತನಾಡಿ, ನಾವು ಇದುವರೆಗೆ  87 ಕ್ಕೂ ಹೆಚ್ಚು ಮೃತ ದೇಹಗಳನ್ನು ಹೊರತೆಗೆದಿದ್ದೇವೆ. ಅವರಲ್ಲಿ ಮಹಿಳೆಯರು, ಮೂವರು ಮಕ್ಕಳು ಮತ್ತು  ಪುರುಷರು ಇದ್ದಾರೆ.  ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸತ್ಸಂಗದಲ್ಲಿ ಪಾಲ್ಗೊಳ್ಳುವಾಗ ಕಾಲ್ತುಳಿತ ಸಂಭವಿಸಿದೆ ಎಂಬ ಮಾಹಿತಿ ಇದೆ. ಆದರೆ ಸಂಪೂರ್ಣ ವಿವರ ತಿಳಿದಿಲ್ಲ. ಎಂದು ಅವರು ತಿಳಿಸಿದ್ದಾರೆ. ಈ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರು ಮಾತನಾಡಿ, ಸ್ಥಳೀಯ ಆಧ್ಯಾತ್ಮಿಕ ಗುರುವಿನ ಗೌರವಾರ್ಥ ಈ ಸತ್ಸಂಗವನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮ ಮುಗಿಸಿ ಭಕ್ತರು ಹಿಂತಿರುಗಿದಾಗ ನೂಕುನುಗ್ಗಲು ಉಂಟಾಯಿತು ಎಂದರು.

Advertisement
Tags :
bengaluruchitradurgadiedheartbreaking incidentNewdelhipeoplestampedesuddionesuddione newsUttar Pradeshಉತ್ತರಪ್ರದೇಶಕಾಲ್ತುಳಿತಚಿತ್ರದುರ್ಗನವದೆಹಲಿಬೆಂಗಳೂರುಮಂದಿಸಾವುಸುದ್ದಿಒನ್ಸುದ್ದಿಒನ್ ನ್ಯೂಸ್ಹೃದಯವಿದ್ರಾವಕ ಘಟನೆ
Advertisement
Next Article