ಜೂ.20ರ ತನಕ ರಾಜ್ಯದಲ್ಲಿ ಜೋರು ಮಳೆ : ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಬಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 20ರ ತನಕ ಮಳೆಯಾಗಲಿದೆ ಎಂದು ತಿಳಿಸಿದೆ. ಅದರಲ್ಲೂ ಗಂಟೆಗೆ 40-50 ಕಿಲೋ ಮೀಟರ್ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿರುಗಾಳಿ ಸಹಿತ ಮಳೆಯ ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳದಲ್ಲೂ ಮಳೆ ಆಗಲಿದೆ. ಬೆಂಗಳೂರಿನಲ್ಲಿಯೂ ಜೂನ್ 20ರವರೆಗೆ ಸಾಧರಣ ಮಳೆ ಬೀಳುವ ಸಂಭವ ಇದೆ. ಸಂಜೆ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಮಳೆಯ ಮುನ್ಸೂಚನೆ ಇದೆ. ಕಳೆದ ಎರಡು ದಿನದಿಂದ ನಗರದಲ್ಲಿ ಗಣನೀಯವಾಗಿ ಉಷ್ಣಾಂಶ ಇಳಿಕೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ರೈತರಿಗೆ ಸಮಾಧಾನ ಸಿಕ್ಕಿದೆ. ಉಳುಮೆ ಮಾಡುವುದಕ್ಕೆ ಶುರು ಮಾಡಿದ್ದಾರೆ. ಕಳೆದ ವರ್ಷ ಮಳೆ ಸಂಪೂರ್ಣವಾಗಿ ಹೋಗಿತ್ತು. ತೀರ ಬರಗಾಲ ಅನುಭವಿಸಿದ್ದಾರೆ ಜನ. ಸದ್ಯ ಮಳೆಗಾಲ ಶುರುವಾಗಿದ್ದು, ಈ ಬಾರಿ ಉತ್ತಮ ಮಳೆಯಾಗಲಿದೆ. ಬೆಳೆಯೂ ಆಗಲಿದೆ ಎಂಬ ನಂಬಿಕೆ ರೈತರಲ್ಲಿದೆ.