Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಾಸ್ಟೆಲ್ ನಲ್ಲಿ ಅವ್ಯವಸ್ಥೆ : ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

04:45 PM Dec 04, 2023 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 04 : ಹಾಸ್ಟೆಲ್ ನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಬಳಿ ಕಾನೂನು ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Advertisement

ನಗರದ ಸರಸ್ವತಿ ಕಾನೂನು ಕಾಲೇಜಿನ ವಿಧ್ಯಾರ್ಥಿಗಳು ಧವಳಗಿರಿ ಬಡಾವಣೆಯ ಹಾಸ್ಟೆಲ್ ನಲ್ಲಿದ್ದು, ಅವರಿಗೆ ಅಲ್ಲಿ ಕೆಲವು ಮೂಲಭೂತ ಸೌಲಭ್ಯಗಳ ಕೊರತೆ ಇರುವುದಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಬಳಿ ತೆರಳಿ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್‍ನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಟ್ಯಾಂಕರ್ ಮೂಲಕ ನೀರು ತರಿಸುತ್ತಿದ್ದು ಆ ನೀರು ಕಲುಷಿತಗೊಂಡಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಶುದ್ದ ಕುಡಿಯುವ ನೀರು,
ನಿಲಯ ಪಾಲಕರ ನೇಮಕ, ಮಲಗಲು ಸರಿಯಾದ ಹಾಸಿಗೆ, ಹೊದಿಕೆ ವ್ಯವಸ್ಥೆ, ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಒದಗಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಸುಮಾರು 120 ವಿಧ್ಯಾರ್ಥಿಗಳು ಈ ಹಾಸ್ಟೆಲ್ ನಲ್ಲಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ  ಪ್ರತಿಭಟನಾ ಸ್ಥಳಕ್ಕೆ ಇಲಾಖೆಯ ಉಪ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಅವರು ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದು ಶೀಘ್ರವಾಗಿ ಸಮಸ್ಯೆಗಳನ್ನ ಬಗೆಹರಿಸುವ ಭರವಸೆಯನ್ನು ನೀಡಿದರು.

Advertisement
Tags :
chitradurgaHoatel studentshostelStudents protestಚಿತ್ರದುರ್ಗವಿದ್ಯಾರ್ಥಿಗಳ ಪ್ರತಿಭಟನೆಹಾಸ್ಟೆಲ್ ನಲ್ಲಿ ಅವ್ಯವಸ್ಥೆ
Advertisement
Next Article