Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ : ಸಿಎಂ ಹೇಳಿದ್ದೇನು..?

05:09 PM Apr 19, 2024 IST | suddionenews
Advertisement

ಬೆಂಗಳೂರು: ನಿನ್ನೆ ಹುಬ್ಬಳ್ಳಿ ಕಾಲೇಜಿನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನೇ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದನ್ನು ಲವ್ ಜಿಹಾದ್ ಎಂದೇ ಬಿಂಬಿಸುತ್ತಿದ್ದಾರೆ. ಈ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರಿಗೆ ಶಿಕ್ಷೆಯಾಗುವ ಬಗ್ಗೆ ಮಾತನಾಡಿದ್ದಾರೆ.

Advertisement

ಈ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಯಾವುದೇ ಮರ್ಡರ್ ವೈಯಕ್ತಿಕ ಕಾರಣಕ್ಕೆ ಆಗಿರತ್ತೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ ಅದನ್ನ ಮಾಡ್ತಿದ್ದೇವೆ. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ.

ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು.
ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ‌ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ ಎಂದಿದ್ದಾರೆ.

Advertisement

Advertisement
Tags :
bangaloreCM SiddaramaiahhubliNehaನೇಹಾ ಹತ್ಯೆ ಪ್ರಕರಣಬೆಂಗಳೂರುಸಿಎಂ ಸಿದ್ದರಾಮಯ್ಯಹುಬ್ಬಳ್ಳಿ
Advertisement
Next Article