ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ ಕಿವಿ ಮಾತು
ಬೆಂಗಳೂರು: ಸಿಗರೇಟ್ ಸೇದುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತು. ಆ ಪ್ಯಾಕ್ ಮೇಲೆ ಕೂಡ ಬರೆದಿರುತ್ತೆ. ಆದರೆ ಸಾಕಷ್ಟು ಜನ ಇಂದು ಸಿಗರೇಟಿಗೆ ದಾಸರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ್ದಾರೆ. ಸಿಗರೇಟಿನಿಂದ ದೂರವಿರಿ ಎಂದಿದ್ದಾರೆ.
ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಅಇದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಿಗರೇಟು ಆರೋಗ್ಯಕ್ಕೆ ಮಾರಕ ಎಂದರು ಜನ ಸಿಗರೇಟು ಸೇದುತ್ತಾರೆ. ದುಶ್ಚಟಗಳಿಂದ ದೂರವಿರಬೇಕು, ಆರೋಗ್ಯದ ವಿಚಾರದಲ್ಲಿ ಜಾಗರೂಜರಾಗಿರಬೇಕು. ಈ ಹಿಂದೆ ನನಗೂ ಕೂಡ ಸುಗರೇಟು ಸೇದುವ ಅಭ್ಯಾಸವಿತ್ತು. ಅದರಿಂದಾಗಿಯೇ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದೇನೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವವರು ಹೆಚ್ಚು ಸಮಾಜಮುಖಿ ಕೆಲಸಗಳನ್ನು ಮಾಡಬೇಕು ಎಂದಿದ್ದಾರೆ.
ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅವಶ್ಯಕ. ಯಾಕಂದ್ರೆ ರೋಗಿಯ ಪ್ರಾಣ ಉಳಿಸಿದರೆ ಅವರನ್ನೇ ದೇವರು ಎಂದುಕೊಳ್ಳುತ್ತಾರೆ. ಯಾವುದೃ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರು ಅನಾಹುತವಾಗುತ್ತದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಇರಬೇಕು. ಇದು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗವನ್ನು ತಡೆಗಟ್ಟಬಹುದು, ರೋಗಿಗಳು ಕಡಿಮೆ ಆಗುತ್ತಾರೆ. ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಕೂಡ ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರೇ ಹೆಚ್ಚು ಬರುತ್ತಾರೆ. ಆ ರೋಗಿಗಳಿಗೆ ವೈದ್ಯರು ಆತ್ಮಸ್ಥೈರ್ಯವನ್ನು ಹೆಚ್ಚು ತುಂಬುವಂತೆ ಆಗಬೇಕು. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಜಾಸ್ತಿಯಾಗುತ್ತಿದೆ. ಅದನ್ನು ತಡೆಗಟ್ಟಲು ಸಭೆ ನಡೆಸಲಾಗುತ್ತದೆ ಎಂದಿದ್ದಾರೆ.