For the best experience, open
https://m.suddione.com
on your mobile browser.
Advertisement

ಜಾತಿಗಣತಿಗೆ ನನ್ನ ವಿರೋಧವಿಲ್ಲ : ಡಿಕೆ ಶಿವಕುಮಾರ್

04:14 PM Dec 12, 2023 IST | suddionenews
ಜಾತಿಗಣತಿಗೆ ನನ್ನ ವಿರೋಧವಿಲ್ಲ   ಡಿಕೆ ಶಿವಕುಮಾರ್
Advertisement

Advertisement
Advertisement

ಬೆಂಗಳೂರು: ಕರ್ನಾಟಕದಲ್ಲಿ ಜಾತಿ ಗಣತಿ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜಾತಿಗಣತಿ ವರದಿ ಬಿಡುಗಡೆಗೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಹೀಗಾಗಿ ಜಾತಿಗಣತಿ ವರದಿ ಬಿಡುಗಡೆ ತಡವಾಗುತ್ತಿದೆ ಎನ್ನಲಾಗಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿ ಬಿಡುಗಡೆ ಮಾಡಲು ರೆಡಿ ಎಂದರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದೀಗ ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

Advertisement

ಜಾತಿ ಗಣತಿ ವರದಿಗೆ ಎಲ್ಲಿಯೂ ನಾನು ವಿರೋಧ ವ್ಯಕ್ತಪಡಿಸಿಲ್ಲ. ಜಾತಿಗಣತಿಯ ವರದಿ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ತಿಳಿಸಿದ್ದಾರೆ. ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು ಎಂದಿದ್ದಾರೆ.

Advertisement

ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದು ತಿಳಿಸಿದರು.

Advertisement
Tags :
Advertisement