Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ : ದೇಶಪಾಂಡೆ ಅಚ್ಚರಿಯ ಹೇಳಿಕೆ..!

06:21 PM Sep 01, 2024 IST | suddionenews
Advertisement

ಮೈಸೂರು: ಈಗಾಗಲೇ ಕಾಂಗ್ರೆಸ್ ಸರ್ಕಾರದಲ್ಲಿ ಒಂದು ಕಡೆ ಮೂಡಾ ಹಗರಣದ ಸಮಸ್ಯೆಯಾದರೆ ಮತ್ತೊಂದು ಕಡೆ ಸಿಎಂ ಬದಲಾವಣೆಯ ಕೂಗು ಕೂಡ ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಆರ್.ವಿ.ದೇಶಪಾಂಡೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿದ್ದರಾಮಯ್ಯ ಅನುಮತಿ ನೀಡಿದರೆ ನಾನೇ ಸಿಎಂ ಆಗುತ್ತೇನೆ ಎಂದಿದ್ದಾರೆ.

Advertisement

ಫೋನ್ ಟ್ಯಾಪಿಂಗ್ ಆರೋಪ ಬಂದ ತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ರು. ಈಗ ದಿನ ಫೋನ್ ಟ್ಯಾಪ್ ನಡೆತಾ ಇದೆ. ಈಗ ಮೌಲ್ಯಾದರಿತ ರಾಜಕಾರಣ ನಡೆಯುತ್ತಿಲ್ಲ. ಹಿಂದೆ ಮೌಲ್ಯಾದರಿತ ರಾಜಕಾರಣ ಮಾಡುತ್ತಿದ್ರು, ಅದೇ ರೀತಿ ನಡೆದು ಕೊಳ್ಳುತ್ತಿದ್ದರು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ ಎಂದು ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾನು ಸಚಿವ ಆಗಿ ಆಗಿ ದಣಿದಿದ್ದೇನೆ. ಇನ್ನೇನಿದ್ರು ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿರುವ ದೇಶಪಾಂಡೆ, ಹಾಗಾದ್ರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಲೈಫ್ ನಲ್ಲಿ ಆಂಭಿಷನ್ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ರು ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಸಿದ್ದರಾಮಯ್ಯ ಇರ್ತಾರೇ. ಬದಲಾವಣೆ ಚರ್ಚೆ ನಡೆದಿಲ್ಲ. ಸದ್ಯ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿಲ್ಲ. ನ‌ನಗೆ ಗೊತ್ತಿಲ್ಲದ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವ ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದಿದ್ದಾರೆ.

Advertisement

Advertisement
Tags :
bengaluruchitradurgaCM SiddaramaiahDeshpandesuddionesuddione newsಅಚ್ಚರಿಯ ಹೇಳಿಕೆಚಿತ್ರದುರ್ಗದೇಶಪಾಂಡೆಬೆಂಗಳೂರುಸಿಎಂ ಆಗುತ್ತೇನೆಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article