ದಳಪತಿಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಇಬ್ರಾಹಿಂ
ಬೆಂಗಳೂರು: ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ವರಿಷ್ಠ ದೇವೇಗೌಡ ಅವರು ಉಚ್ಛಾಟನೆ ಮಾಡಿದ್ದಾರೆ. ಇದೀಗ ಈ ಸಂಬಂಧ ಇಬ್ರಾಹಿಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಟಿ ಸಿವಿಲ್ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕಾನೂನು ಬಾಹಿರವಾಗಿ ಉಚ್ಛಾಟನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಅರ್ಜಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಲೋಕಸಭಾ ಚುನಾವಣೆಗೆ ಈಗಾಗಲೇ ಸಿದ್ದತೆ ನಡೆಸಲಾಗುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಮಾಡಿಕೊಂಡಿದ್ದು, ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಮಾತುಕತೆ ಕೂಡ ನಡೆಸಲಾಗಿದೆ. ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಇದರ ನಡುವೆ ಉಚ್ಛಾಟಿತ ಸಿ ಎಂ ಇಬ್ರಾಹಿಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಒರಿಜಿನಲ್ ಜೆಡಿಎಸ್ ನಮ್ಮದೆ ಎಂದು ಚರ್ಚೆ ಹುಟ್ಟು ಹಾಕಿದ್ದರು. ಈ ರೀತಿಯ ಹಲವು ಬೆಳವಣಿಗೆಗಳು ಪಕ್ಷದ ಸಂಘಟನೆಗೆ ಹಿನ್ನಡೆಯಾಗುವ ಕಾರಣ ದೇವೇಗೌಡ ಅವರು, ಸಿ ಎಂ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿ, ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.