Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ :  ಪಿ.ಆರ್.ರಮೇಶ್

05:37 PM Feb 19, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.19  : ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ ಎಂದು ಕೆ.ಪಿ.ಸಿ.ಸಿ. ಉಪಾಧ್ಯಕ್ಷರು ಬೆಂಗಳೂರು ವಿಭಾಗದ ಉಸ್ತುವಾರಿ ಪಿ.ಆರ್.ರಮೇಶ್ ಕಾರ್ಯಕರ್ತರನ್ನು ಎಚ್ಚರಿಸಿದರು.

Advertisement

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಕರೆಯಲಾಗಿದ್ದ ಬಿ.ಎಲ್.ಎ. ಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತ ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ರಾಜ್ಯದ ಜನತೆಗೆ ನೀಡಲಾಗಿದ್ದ ಭರವಸೆಗಳನ್ನು ಪೂರೈಸಲಾಗಿದೆ. ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಪಕ್ಷಕ್ಕಾಗಿ ಶ್ರಮಪಟ್ಟು ದುಡಿಯುತ್ತಿರುವ ಕಾರ್ಯಕರ್ತರು ನಮಗೆ ಏನು ಅಧಿಕಾರ ಸಿಗಲಿಲ್ಲವೆಂದು ಕೊರಗುವುದು ಬೇಡ. ನಿಮ್ಮ ಸೇವೆಯನ್ನು ಗುರುತಿಸಿ ನಾಯಕರುಗಳು ಒಂದಲ್ಲ ಒಂದು ದಿನ ಅಧಿರಾರ ನೀಡುತ್ತಾರೆ. ಅಲ್ಲಿಯವರೆಗೂ ಸಮಾಧಾನದಿಂದಿರಿ ಎಂದು ಕರೆ ನೀಡಿದರು.

ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಗೆದ್ದಿದೆಯೆಂದರೆ ಅದಕ್ಕೆ ಕಾರ್ಯಕರ್ತರ ಪರಿಶ್ರಮ ಕಾರಣ. ರಾಜ್ಯದಲ್ಲಿ 53 ಸಾವಿರ ಬೂತ್‍ಗಳಿವೆ. 33 ಸಾವಿರ ಬಿ.ಎಲ್.ಎ.ಗಳಿದ್ದಾರೆ. ಈಗ ಬಿ.ಎಲ್.ಎ. ಟುಗಳನ್ನು ನೇಮಕ ಮಾಡಬೇಕು. ಅದರ ಜವಾಬ್ದಾರಿಯನ್ನು ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ನೀಡಲಾಗಿದೆ. ಕೋಮುವಾದಿ ಬಿಜೆಪಿ.ಯವರು ಏನು ಮಾಡಲಿಲ್ಲವೆಂದರೂ ಗೆಲ್ಲುತ್ತೇವೆಂಬ ಭ್ರಮೆಯಲ್ಲಿದ್ದಾರೆ. ರಾಜ್ಯದಿಂದ ಗೆದ್ದು ಹೋಗಿರುವ ಬಿಜೆಪಿ. ಎಂ.ಪಿ.ಗಳು ಪಾರ್ಲಿಮೆಂಟ್‍ನಲ್ಲಿ ರಾಜ್ಯದ ಪರ ಧ್ವನಿ ಎತ್ತುತ್ತಿಲ್ಲ. ಪ್ರಜಾಪ್ರಭುತ್ವ ಕುಸಿಯುತ್ತಿದೆ. ಮುಂದಿನ ಮಕ್ಕಳ ಭವಿಷ್ಯದ ದೃಷ್ಠಿಯಿಂದ ಸಂವಿಧಾನವನ್ನು ಉಳಿಸಬೇಕಾಗಿದೆ ಎಂದರು.

ಬಿಎಲ್‍ಎ. ಟುಗಳ ಜೊತೆ 20 ಜನರ ತಂಡ ರಚನೆಯಾಗುತ್ತದೆ. ಪ್ರತಿ ಬೂತ್‍ನಲ್ಲಿ ಎಲ್ಲಾ ಜಾತಿ ಧರ್ಮದವರಿರಬೇಕು. ಕೇಡರ್ ಬೇಸ್ ಪಾರ್ಟಿ ರೀತಿ ಕೆಲಸ ಮಾಡುತ್ತೇವೆ. ಬೂತ್‍ನಲ್ಲಿ ಪಕ್ಷ ಬೆಳೆಯಬೇಕಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ ಚುನಾವಣೆಗೆ ಇದು ಬುನಾದಿಯಾಗಲಿದೆ ಎಂದರು ಹೇಳಿದರು.
ಚಿತ್ರದುರ್ಗ ಲೋಕಸಭಾ ಬಿಎಲ್‍ಎ. ನೇಮಕಾತಿ ಉಸ್ತುವಾರಿ ಎ.ಎಂ.ಅಮೃತೇಶ್ವರಸ್ವಾಮಿ, ಮುನೀರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಹೆಚ್.ಅಂಜಿನಪ್ಪ, ಪ್ರೊಫೆಷನಲ್ ಸೆಲ್ ವಿಭಾಗದ ಅಧ್ಯಕ್ಷ ಮಹಡಿ ಶಿವಮೂರ್ತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್ ವೇದಿಕೆಯಲ್ಲಿದ್ದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಜಿಲ್ಲಾಧ್ಯಕ್ಷರುಗಳು ಸಭೆಯಲ್ಲಿ ಹಾಜರಿದ್ದರು.

Advertisement
Tags :
chitradurgaCongressconstitutiondemocracyP.R. Rameshsuddionesuddione newssurviveಕಾಂಗ್ರೆಸ್ಚಿತ್ರದುರ್ಗಪಿ.ಆರ್.ರಮೇಶ್ಪ್ರಜಾಪ್ರಭುತ್ವಸಂವಿಧಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article