Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜಾತಿ ಗಣತಿ ಜಾರಿಯಾದರೆ ಯಾರಿಗೆ..? ಯಾವ ಲಾಭವಿದೆ..? ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

05:42 PM Oct 08, 2024 IST | suddionenews
Advertisement

 

Advertisement

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಜಾತಿ ಗಣತಿ ವಿಚಾರವನ್ನು ತೆಗೆದಿದ್ದರು. ಇದು ಚರ್ಚೆ ಹುಟ್ಟು ಹಾಕಿತ್ತು. ಇದೀಗ ಗೃಹ ಸಚಿವ ಜಿ.ಪರಮೇಶ್ಚರ್ ಅವರು, ಜಾತಿಗಣತಿ ವರದಿ ಜಾರಿಯಾದರೆ ಯಾರಿಗೆಲ್ಲ ಲಾಭ ಎಂಬುದನ್ನು ವಿವರಿಸಿದ್ದಾರೆ.

ನಾವೂ ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಅದನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬಿಟ್ಟರು ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿ ಜಾತಿ ಗಣತಿ ಮಾಡಿ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ ಮಾತನಾಡಿದರು. ಇದೀಗ ಸರ್ಕಾರವೇ ತೀರ್ಮಾನಿಸಿದೆ‌. ಜಾತಿ ಗಣತಿ ವರದಿ ಸ್ವೀಕರಿಸಿ, ಚರ್ಚಿಸಿ, ಅನುಷ್ಠಾನಕ್ಕೆ ತರಲು ಶ್ರಮಿಸಲಾಗುತ್ತಿದೆ. ಇದು ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದ ಜನರು ಅಧಿಕ ಸಂಖ್ಯೆಯಲ್ಲಿದ್ದಾರೆ. ಜಾತಿಗಣತಿಯ ಆಧಾರದ ಮೇಲೆ‌ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲು ಸಹಾಯವಾಗುತ್ತದೆ ಎಂದು ಎಲ್ಲರು ಹೇಳುತ್ತಾರೆ. ಯಾಕೆ ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೆ ಎಂದು ಪ್ರಶ್ನಿಸಿದ್ದಾರೆ.

Advertisement

ವರದಿ ಆಧಾರದಲ್ಲಿ ಯೋಜನೆಗಳನ್ನು ರೂಪಿಸಲು ಸಹಾಯವಾಗುತ್ತದೆ. ಇದು ಅಭಿವೃದ್ಧಿಗೂ ಸಹಾಯವಾಗುತ್ತದೆ. ಯಾವ ಆಧಾರದ ಮೇಲೆ ಯೋಜನೆಗಳನ್ನು ಕೊಡಬೇಕು ಎಂಬ ಪ್ರಶ್ನೆ ಬಂದಾಗ ಸ್ವಾಭಾವಿಕವಾಗಿ ನಾವೂ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡೆ ಕೊಡಬೇಕಾಗುತ್ತದೆ. ಅದಕ್ಕೋಸ್ಕರ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು. ಅಕ್ಟೋಬರ್ 18 ರಂದು ಈ ವಿಚಾರವನ್ನು ಸಚಿವ ಸಂಪುಟದ ಮುಂದೆ ತರುತ್ತೇವೆಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 160 ಕೋಟಿ ಖರ್ಚು ಮಾಡಿ, ಯಾವ ಸಮುದಾಯ ಎಷ್ಟು ಜನಸಂಖ್ಯೆ ಇದೆ ಎಂಬುದು ಗೊತ್ತಾಗಬೇಕಿದೆ ಎಂದಿದ್ದಾರೆ.

Advertisement
Tags :
bengalurucaste censuschitradurgaHome Minister Dr. G. Parameshwaraimplementedsuddionesuddione newsಚಿತ್ರದುರ್ಗಜಾತಿ ಗಣತಿಬೆಂಗಳೂರುಲಾಭಸಚಿವ ಜಿ ಪರಮೇಶ್ವರ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article