Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ : ಅಂಬೇಡ್ಕರ್ ಎಚ್ಚರಿಕೆಯ ಮಾತು ನೆನೆದ ಸಿಎಂ

01:52 PM Nov 26, 2023 IST | suddionenews
Advertisement

ಬೆಂಗಳೂರು: ಇಂದು ಭಾರತ ಸಂವಿಧಾನದ ದಿನ. ಈ ವಿಶೇಷವಾದ ದಿನದಂದು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅಂಬೇಡ್ಕರ್ ಅವರ ನುಡಿಗಳನ್ನು ನೆನಪಿಸಿಕೊಂಡಿದ್ದಾರೆ.

Advertisement

ಭಾರತ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತ ದೇಶದ ಎಲ್ಲರ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೆ ಸಂವಿಧಾನದ ಮೂಲ ಆಶಯ. ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು.

ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರು, ಸರಿಯಾದವರ ಕೈಗಳಲ್ಲಿ ಸಂವಿಧಾನ ಇರದೆ ಇದ್ದರೆ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನ ಧೈಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರ್ಕಾರದ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.

Advertisement

Advertisement
Tags :
bangaloreCM SiddaramaiahDr BR Ambedkarಅಂಬೇಡ್ಕರ್ಬೆಂಗಳೂರುಸರಿಯಾದ ಕೈಸಂವಿಧಾನಸಿಎಂ ಸಿದ್ದರಾಮಯ್ಯ
Advertisement
Next Article