ತಪ್ಪು ಮಾಡಿದ್ರೆ ಬಿಡುವ ಪ್ರಶ್ನೆಯೇ ಇಲ್ಲ : ಬಿಎಸ್ವೈ ಪ್ರಕರಣಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಖಡಕ್ ಎಚ್ಚರಿಕೆ..!
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ದೂರುದಾರೆ ಈಗಾಗಲೇ ಸಾವನ್ನಪ್ಪಿದ್ದಾರೆ. ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಲಾಗಿತ್ತು. ಇದೀಗ ಈ ಪ್ರಕತಣ ಸಂಬಂಧ ಮಹಿಳಾ ಆಯೋಗ ಮುಂದುವರೆದಿದ್ದು, ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ದೂರುದಾರೆ ಸಂತ್ರಸ್ತೆಯ ತಾಯಿಯ ನಿಧನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.
ಸದ್ಯ ಪ್ರಕರಣ ಹೈಕೋರ್ಟ್ ನಲ್ಲಿದೆ. ಈ ಬಗ್ಗೆ ಮಹಿಳಾ ಆಯೋಗ, ಗೃಹ ಇಲಾಖೆಗೆ ಪತ್ರ ಬರೆದಿದ್ದು, ಮಹಿಳೆಯ ಅನುಮಾನಾಸ್ಪದ ಸಾವು ಹಾಗೂ ಅಂತ್ಯಸಂಸ್ಕಾರದ ಕುರಿತು ವರದಿ ಸಲ್ಲಿಸುವಂತೆ ಬೆಂಗಳೂರು ಪೊಲೀಸರಿಗೆ ಪತ್ರದ ಮೂಲಕ ಸೂಚನೆ ನೀಡಲಾಗಿದೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗಲಕ್ಷ್ಮೀ, ಪ್ರಕರಣ ತನಿಖೆಯ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದೇನೆ. ಪ್ರಕರಣದಲ್ಲಿ ಮಾಜಿ ಸಿಎಂ ಆಗಿರಲಿ, ಸಾಮಾನ್ಯರೇ ಆಗಿರಲಿ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸಂತ್ರಸ್ತೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮಹಿಳೆಯ ಪುತ್ರಿ ಭೇಟಿಯಾಗಿದ್ದರು. ಕ್ಯಾನ್ಸರ್ ನಿಂದ ದಿಢೀರ್ ಸಾವು ಹೇಗೆ ಉಂಟಾಗುತ್ತದೆ ಎಂಬುದೇ ಪ್ರಶ್ನೆ. ಮಹಿಳೆಯ ಶವ ಹಸ್ತಾಂತರದ ವೇಳೆಯೂ ಹಲವು ಲೋಪಗಳು ಉಂಟಾಗಿವೆ. ಇದೆಲ್ಲ ನಡೆಗಳು ಅನುಮಾನಕ್ಕೆ ಕಾರಣವಾಗಿವೆ. ಹುಳಿಮಾವು ಠಾಣೆಯಲ್ಲಿ ಮಹಿಳೆಯ ಕಡೆಯವರು ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.