For the best experience, open
https://m.suddione.com
on your mobile browser.
Advertisement

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ : ಜನವರಿ 22 ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

05:25 PM Jan 10, 2024 IST | suddionenews
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ   ಜನವರಿ 22 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
Advertisement

ಸುದ್ದಿಒನ್ : ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭ ಜನವರಿ 22 ರಂದು ನಡೆಯಲಿದೆ.  ಉತ್ತರ ಪ್ರದೇಶ ಸರ್ಕಾರ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಅದ್ಧೂರಿ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡುತ್ತಿದೆ. 

Advertisement
Advertisement

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ಉತ್ತರಪ್ರದೇಶ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಇದಲ್ಲದೇ ಅಂದು ಉತ್ತರ ಪ್ರದೇಶದಾದ್ಯಂತ ಮದ್ಯ ಮಾರಾಟ ಇರುವುದಿಲ್ಲ. ಮತ್ತು ಜನವರಿ 22 ರಂದು, ಉತ್ತರ ಪ್ರದೇಶದ ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಬೇಕು ಎಂದು ತಿಳಿಸಲಾಗಿದೆ.

Advertisement

ರಾಮಮಂದಿರ ಉದ್ಘಾಟನೆಯ ಸಿದ್ಧತೆಗಳನ್ನು ಪರಿಶೀಲಿಸಲು ಅಯೋಧ್ಯೆಗೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್, ಅಯೋಧ್ಯೆಯಲ್ಲಿ ಸ್ವಚ್ಛತೆಗಾಗಿ 'ಕುಂಭ ಮಾದರಿ'ಯನ್ನು ಜಾರಿಗೆ ತರಲು ಅಧಿಕಾರಿಗಳಿಗೆ ಆದೇಶಿಸಿದರು. ಯೋಗಿ ಆದಿತ್ಯನಾಥ್ ಅವರು ಜನವರಿ 14 ರಂದು ಅಯೋಧ್ಯೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನಿಗೆ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ನಗರವನ್ನು ಸ್ವಚ್ಛವಾಗಿಡುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಐಪಿಗಳ ತಂಗುದಾಣವನ್ನು ಮೊದಲೇ ನಿರ್ಧರಿಸಬೇಕು ಎಂದರು.

Advertisement
Advertisement

ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಯುಪಿ ಗವರ್ನರ್ ಆನಂದಿ ಬೆನ್ ಪಟೇಲ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ 7 ಸಾವಿರ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇದರಲ್ಲಿ ರಾಜಕಾರಣಿಗಳು, ಬಾಲಿವುಡ್ ನಾಯಕಿಯರು, ಕ್ರೀಡಾಪಟುಗಳು ಮತ್ತು ಉದ್ಯಮಿಗಳು ಇದ್ದಾರೆ.
ಅವರೆಲ್ಲರಿಗೂ ಈಗಾಗಲೇ ಆಮಂತ್ರಣವನ್ನೂ ಕಳುಹಿಸಲಾಗಿದೆ.

Advertisement
Tags :
Advertisement