Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಡೆಂಗ್ಯೂ ಹೆಚ್ಚಳ : ಟಾಸ್ಕ್ ಫೋರ್ಸ್ ರಚಿಸಲು ಸಿಎಂ ಸೂಚನೆ

05:26 PM Jul 09, 2024 IST | suddionenews
Advertisement

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಸಾವುಗಳ ಪ್ರಮಾಣವೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸಿಎಂ ಇಂದಿನ ಸಭೆಯಲ್ಲೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂಚಾಯತ್ ಸಿಇಒಗಳು ಹಾಗೂ ಡಿಹೆಚ್ಒಗಳಿಗೆ ಡರಂಗ್ಯೂ ಹರಡದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕೆಂದು ತಿಳಿಸಿದ್ದಾರೆ.

Advertisement

ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬರಬೇಕಿದೆ. ಏನು ಮಾಡಬೇಕು, ಎಷ್ಟು ಹಣದ ಅಗತ್ಯವಿದೆ ತಿಳಿಸಿ. ತಕ್ಷಣ ಹಣ ಬಿಡುಗಡರಯಾಗುತ್ತದೆ. ಆದರೆ ಡೆಂಗ್ಯೂ ನಿಯಂತ್ರಣಕ್ಕೆ ಬರಬೇಕು. ಹರಡದಂತೆ ನೋಡಿಕೊಳ್ಳಬೇಕು. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯಮ್ನು ಘೋಷಿಸುವ ಅಗತ್ಯವಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲೂ ಡೆಂಗ್ಯೂ ಪ್ರಕರಣಗಳನ್ನು ತಡೆಯಲು ವಿಶೇಷ ವಾರ್ಡ್ ರಚಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ವ್ಯವಸ್ಥೆ ಕಲ್ಪಿಸಬೇಕು.

ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು. ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದೆ. 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ಈಗಾಗಲೇ 503 ನಮ್ಮ ಕ್ಲಿನಿಕ್ ಗಳು ಕಾರ್ಯ ನಿರ್ವಹಿಸುತ್ತಿವೆ. ನಮ್ಮ ಕ್ಲಿನಿಕ್ ಗಳಲ್ಲಿ ಲಭ್ಯವಿರುವ ಮಾಹಿತಿಯನ್ನು ಪ್ರಚುರ ಪಡಿಸುವ ಕೆಲಸವಾಗಬೇಕು ಎಂದಿದ್ದಾರೆ.

Advertisement

Advertisement
Tags :
bengaluruchitradurgaCM instructsform a task forceIncrease in denguesuddionesuddione newsಚಿತ್ರದುರ್ಗಟಾಸ್ಕ್ ಫೋರ್ಸ್ಡೆಂಗ್ಯೂ ಹೆಚ್ಚಳಬೆಂಗಳೂರುಸಿ ಎಂ ಸಿದ್ದರಾಮಯ್ಯಸಿಎಂ ಸೂಚನೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article