For the best experience, open
https://m.suddione.com
on your mobile browser.
Advertisement

ಉಕ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಮೋದಿ : ಶಾಂತಿ ಸ್ಥಾಪನೆಗೆ ಸಹಕಾರಿ : ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹೇಳಿಕೆ

06:29 PM Aug 23, 2024 IST | suddionenews
ಉಕ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಮೋದಿ   ಶಾಂತಿ ಸ್ಥಾಪನೆಗೆ ಸಹಕಾರಿ   ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹೇಳಿಕೆ
Advertisement

ಸುದ್ದಿಒನ್ | ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿದ್ದಾರೆ. ಅವರು ಶುಕ್ರವಾರ (ಆಗಸ್ಟ್ 23) ಬೆಳಿಗ್ಗೆ ಪೋಲೆಂಡ್‌ನಿಂದ ನೇರ ರೈಲಿನಲ್ಲಿ ಕೀವ್ ತಲುಪಿದರು. ಕೀವ್‌ಗೆ ಆಗಮಿಸಿದಾಗ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯನ್ನು ಭೇಟಿಯಾದ ಬಳಿಕ ಉಕ್ರೇನ್‌ನ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಆಗಮಿಸಿದ ಉಭಯ ನಾಯಕರು ಅಲ್ಲಿನ ಯುದ್ಧದಲ್ಲಿ ಮಡಿದ ಮಕ್ಕಳಿಗೆ ನಮನ ಸಲ್ಲಿಸಿದರು.

Advertisement
Advertisement

ಎರಡೂವರೆ ವರ್ಷಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಗೆ ಭೇಟಿ ನೀಡಿದ್ದಾರೆ. ಇಲ್ಲಿ ಅವರು ಆ ದೇಶದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದಾರೆ. ಸತತ 10 ಗಂಟೆಗಳ ರೈಲು ಪ್ರಯಾಣದ ನಂತರ ಮೋದಿ ಅವರು ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಕೀವ್ ತಲುಪಿದರು. ಕೀವ್‌ನಲ್ಲಿರುವ ಭಾರತೀಯ ಸಮುದಾಯವು ಮೋದಿಗೆ ಭಾರತೀಯ ಸಂಪ್ರದಾಯಗಳೊಂದಿಗೆ ಆತ್ಮೀಯ ಸ್ವಾಗತವನ್ನು ನೀಡಿದವು. ಬಳಿಕ ಫೋಮಿನ್ ಬೊಟಾನಿಕಲ್ ಗಾರ್ಡನ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಿದರು. ಈ ಪ್ರತಿಮೆಯನ್ನು 2020 ರಲ್ಲಿ ಮಹಾತ್ಮ ಗಾಂಧಿಯವರ 151 ನೇ ಜನ್ಮದಿನದ ಸಂದರ್ಭದಲ್ಲಿ ಸ್ಥಾಪಿಸಲಾಯಿತು.

Advertisement

ಪ್ರಧಾನಿ ಮೋದಿ ಉಕ್ರೇನ್ ತಲುಪಿ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಆಲಿಂಗನ ಮಾಡಿಕೊಂಡರು. ಮೋದಿ ಮತ್ತು ಝೆಲೆನ್ಸ್ಕಿ ಉಕ್ರೇನ್ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಒಟ್ಟಿಗೆ ಭೇಟಿ ನೀಡಿದರು. ಇಲ್ಲಿ ಯುದ್ಧದಲ್ಲಿ ಮಡಿದ ಮಕ್ಕಳ ಸ್ಮರಣಾರ್ಥ ಏರ್ಪಡಿಸಿದ್ದ ಪ್ರದರ್ಶನವನ್ನು ವೀಕ್ಷಿಸಿದರು. ಈ ಮಕ್ಕಳಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದರು. ನಂತರ, ಉಭಯ ನಾಯಕರು ಮಾರಿನ್ಸ್ಕಿ ಅರಮನೆಯಲ್ಲಿ ಭೇಟಿಯಾದರು. ಈ ಸಭೆಯ ಹಲವು ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವೇಳೆ ಇಬ್ಬರೂ ನಾಯಕರು ಭಾವುಕರಾದರು.

Advertisement

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಉಕ್ರೇನ್ ರಾಜಧಾನಿ ಕೀವ್‌ಗೆ ಆಗಮಿಸಿದ ಅವರನ್ನು ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳೊಂದಿಗೆ ಸ್ವಾಗತಿಸಲಾಯಿತು. ಅವರು ಇಲ್ಲಿ ಸುಮಾರು 200 ಭಾರತೀಯ ನಾಗರಿಕರನ್ನು ಭೇಟಿಯಾದರು. ಈ ವೇಳೆ ಪ್ರಧಾನಿ ಮೋದಿ ವಾತ್ಸಲ್ಯ ಎದ್ದು ಕಾಣುತ್ತಿತ್ತು. ಉಕ್ರೇನ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ನರೇಂದ್ರ ಮೋದಿ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಕೀವ್‌ಗೆ ಭೇಟಿ ನೀಡಿದ್ದಾರೆ.

ಮಾರಿನ್ಸ್ಕಿ ಅರಮನೆಯಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಉಭಯ ನಾಯಕರ ನಡುವೆ ದ್ವಿಪಕ್ಷೀಯ ಸಭೆ ನಡೆಯಿತು. ಮೋದಿಯನ್ನು ಸ್ವಾಗತಿಸಲು ಮಾರಿನ್ಸ್ಕಿ ಅರಮನೆಯನ್ನು ಭಾರತ ಮತ್ತು ಉಕ್ರೇನ್ ಧ್ವಜಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿಯವರ ಉಕ್ರೇನ್ ಭೇಟಿ ಶಾಂತಿ ಸ್ಥಾಪನೆಗೆ ಸಹಕಾರಿಯಾಗಲಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಥೋನಿ ಗುಟೆರಸ್ ಅವರ ಪ್ರತಿನಿಧಿ ಸ್ಟೀಫನ್ ಡುಜಾರಿಕ್ ಭರವಸೆ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾವು ಅನೇಕ ಪ್ರಮುಖ ದೇಶಗಳ ನಾಯಕರು ಕೀವ್‌ಗೆ ಭೇಟಿ ನೀಡುವುದನ್ನು ನೋಡಿದ್ದೇವೆ ಎಂದು ಡುಜಾರಿಕ್ ಹೇಳಿದರು. ಆದರೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಪ್ರಭಾವ ಬೀರಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಡುಜಾರಿಕ್ ಹೇಳಿದ್ದಾರೆ.

ಉಕ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಮೋದಿ. ಸೋವಿಯತ್ ಒಕ್ಕೂಟದ ವಿಭಜನೆಯ ನಂತರ 1991 ರಲ್ಲಿ ಉಕ್ರೇನ್ ರಚನೆಯಾಯಿತು. ಅಂದಿನಿಂದ ಇಂದಿನವರೆಗೂ ಭಾರತದ ಯಾವ ಪ್ರಧಾನಿಯೂ ಉಕ್ರೇನ್‌ಗೆ ಭೇಟಿ ನೀಡಿಲ್ಲ. ಫೆಬ್ರವರಿ 24, 2022 ರಂದು ರಷ್ಯಾದ ದಾಳಿಯ ನಂತರ, ನ್ಯಾಟೋ ದೇಶಗಳನ್ನು ಹೊರತುಪಡಿಸಿ ಯಾವುದೇ ರಾಷ್ಟ್ರದ ಮುಖ್ಯಸ್ಥರು ಉಕ್ರೇನ್‌ಗೆ ಭೇಟಿ ನೀಡಿಲ್ಲ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಕೆಲವು ತಿಂಗಳ ಹಿಂದೆ ಉಕ್ರೇನ್ ಗೆ ಭೇಟಿ ನೀಡುವಂತೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದರು.

Tags :
Advertisement