ಜೈಹಿಂದ್ ವಾಹಿನಿಯಲ್ಲಿ ಹೂಡಿಕೆ : ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಬಿಐ ನೋಟೀಸ್
ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಿಬಿಐ ನೋಟೀಸ್ ಜಾರಿ ಮಾಡಿದೆ. ಖಾಸಗಿ ವಾಹಿನಿಯೊಂದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹೂಡಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ವಿವರಣೆ ಕೇಳಿ ನೋಟೀಸ್ ಜಾರಿ ಮಾಡಿದೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐನ ಬೆಂಗಳೂರು ಘಟಕ ವಿವರಣೆ ಕೇಳಿ, ನೋಟಿಸ್ ನೀಡಿದೆ. ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಗೆ ಹೂಡಿಕೆ ಮಾಡಿದ್ದಾರೆ ಎಂಬ ವುಚಾರವಿದ್ದು, ಜೈಹಿಂದ್ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಬಿ ಎಸ್ ಶಿಜು ಅವರಿಗೂ ನೋಟೀಸ್ ಜಾರಿ ಮಾಡಲಾಗಿದೆ. ಕೇರಳ ಮೂಲದ ಚಾನಲ್‌ನಲ್ಲಿ ಹೂಡಿಕೆ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಹೂಡಿಕೆಗೆ ಹಾಕಲಾದ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ಸಿಬಿಐ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಬಂಡವಾಳ ಹೂಡಿರುವ 30ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಿದೆ.
ಸಿಆರ್‌ಪಿಸಿ ಸೆಕ್ಷನ್ 91ರ ಅಡಿಯಲ್ಲಿ ಹೊರಡಿಸಲಾದ ತನ್ನ ನೋಟಿಸ್‌ನಲ್ಲಿ, ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವುಗಳನ್ನು ಮಾಡಿದ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಜೈ ಹಿಂದ್ ಚಾನಲ್‌ಗೆ ಹೇಳಿದೆ. 2024ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ. ಇದಲ್ಲದೆ ಸಿಆರ್‌ಪಿಸಿ 91ರಡಿ ಡಿಸಿಎಂ ಡಿಕೆಶಿ ಸೇರಿದಂತೆ 30ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಲಾಗಿದೆ.