ಮಾಜಿ ಪ್ರಧಾನಿ, ಮಾಜಿ ಸಿಎಂ ಮಗನಾಗಿ ಹುಟ್ಟಿರುವುದೇ ದುರದೃಷ್ಟನಾ..? ನಿಖಿಲ್ ಕುಮಾರಸ್ವಾಮಿ ಕಣ್ಣೀರು..!
ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಕಣ ರಂಗೇರಿದೆ. ಸಿಪಿ ಯೋಗೀಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ನೇರಾ ನೇರಾ ಯುದ್ದ ಶುರುವಾಗಿದೆ. ಗೆಲ್ಲಲೇಬೇಕೆಂಬ ಪ್ರತಿಷ್ಠೆಯೂ ಇಬ್ಬರಲ್ಲಿಯೂ ಇದೆ. ನಿಖಿಲ್ ಕುಮಾರಸ್ವಾಮಿ ಈಗಾಗಲೇ ಎರಡು ಬಾರಿ ಸೋಲು ಕಂಡಿದ್ದಾರೆ. ಇದು ಮೂರನೇ ಬಾರಿ ಅಗ್ನಿ ಪರೀಕ್ಷೆ. ಚನ್ನಪಟ್ಟಣದಲ್ಲಿಯೇ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಿಖಿಲ್, ಮತದಾರರ ಮುಂದೆ ಕಣ್ಣೀರು ಹಾಕಿದ್ದಾರೆ.
ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡುತ್ತಾ ಕಣ್ಣೀರು ಸುರಿಸಿದ್ದಾರೆ. ಎರಡು ಭಾರಿ ನಾನು ಚುನಾವಣೆಯಲ್ಲಿ ಸೋರಿದ್ದೇನೆ. ನಾನು ಏನು ತಪ್ಪು ಮಾಡಿದ್ದೀನೋ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ. ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಎಂದುಕೊಂಡಿದ್ದೆ. ಅದರೆ ಸಾಕಷ್ಟು ನೋವುಗಳಿವೆ. ನಾನು ಎರಡು ಚುನಾವಣೆಯಲ್ಲೂ ಸಾಕಷ್ಟು ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ.
ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಬಾರಿ ಈ ಯುವಕನನ್ನು ಗೆಲ್ಲಿಸಿ. ಕಳೆದ ಬಾರಿ ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲು ಕಹಿ ಘಟನೆಯನ್ನು ನೆನದು ನನ್ನ ಮೂಲಕ ಉತ್ತರ ಕೊಡಬೇಕು ಅನ್ನೋದು ಕಾರ್ಯಕರ್ತರ ಭಾವನೆಯಾಗಿತ್ತು. ಅಂಬೇಡ್ಕರ್ ಭವನದಲ್ಲು ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಎಂಬುದು ಎಲ್ಲರಿಗೂ ಗೊತ್ತು. ಆಗ ನಾನು ದೇವೇಗೌಡ ಸಾಹೇಬರಿಗೆ ಮನವಿ ಮಾಡಿದೆ. ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟವಿದೆ. ರೈತರ ಪರವಾಗಿ ಕಾಳಜಿ ಇಟ್ಟುಕೊಂಡು ಈ ಪಕ್ಷವನ್ನು ಕಟ್ಟಿದ್ದಾರೆ. ಕುಮಾರಣ್ಣ ಅವರು ಅಧಿಕಾರ ಇರಲಿ, ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲ ಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ.