For the best experience, open
https://m.suddione.com
on your mobile browser.
Advertisement

ಪೌಢಶಾಲೆ ಮಕ್ಕಳಲ್ಲಿ ವೈಜ್ಞಾನಿಕ ವಿಷಯಗಳನ್ನು ಬಿತ್ತುವುದು ಅತ್ಯಗತ್ಯ : ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್

06:03 PM Feb 16, 2024 IST | suddionenews
ಪೌಢಶಾಲೆ ಮಕ್ಕಳಲ್ಲಿ ವೈಜ್ಞಾನಿಕ ವಿಷಯಗಳನ್ನು ಬಿತ್ತುವುದು ಅತ್ಯಗತ್ಯ   ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ನಾಗಭೂಷಣ್
Advertisement

Advertisement

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16  : ಜಗತ್ತು ಬದಲಾವಣೆಗೆ ತೆರೆದುಕೊಳ್ಳುತ್ತಿರುವುದರಿಂದ ಪೌಢಶಾಲೆ ಮಕ್ಕಳಲ್ಲಿ ವೈಜ್ಞಾನಿಕ ವಿಷಯಗಳನ್ನು ಬಿತ್ತುವುದು ಅತ್ಯಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಹೇಳಿದರು.

Advertisement

ಇಂಡಿಯಾ ಲಿಟರೆಸಿ ಪ್ರಾಜೆಕ್ಟ್, ಕೆನ್ನಮೆಟಲ್ ಇಂಡಿಯಾ ಲಿ. ಬೆಂಗಳೂರು ಇವರುಗಳ ಸಹಯೋಗದೊಂದಿಗೆ ತಾಲ್ಲೂಕಿನ 80 ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಿಗೆ ಡಯಟ್‍ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ವಿಜ್ಞಾನ ಕಿಟ್ ವಿತರಣೆ ಹಾಗೂ ವಿಜ್ಞಾನ ಶಿಕ್ಷಕರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರ ಉದ್ಗಾಟಿಸಿ ಮಾತನಾಡಿದರು.

ಶಿಕ್ಷಣ ಇಲಾಖೆ ನಿಂತ ನೀರಲ್ಲ. ಸರಾಗ. ರಭಸವಾಗಿ ಹರಿಯುತ್ತಿದೆ. ಬೋಧನೆ ಮೂಲಕ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರಯೋಗದ ಮೂಲಕ ಮಕ್ಕಳ ಮನಸ್ಸಿಗೆ ಸುಲಭವಾಗಿ ನಾಟಲು ಸಹಕಾರಿಯಾಗಲಿದೆ. ವಿಜ್ಞಾನವೆಂದರೆ ಪ್ರಯೋಗ. ಬಳಕೆ ಮಾಡುವುದು ಹೇಗೆ ಎನ್ನುವ ಕುರಿತು ಶಿಕ್ಷಕರುಗಳು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳಬೇಕು. ತಂತ್ರಜ್ಞಾನದ ಪ್ರಭಾವ ಮಕ್ಕಳು, ಸಮಾಜದ ಮೇಲೆ ಬೀರುತ್ತಿರುವುದರಿಂದ ಐದರಿಂದ ಹತ್ತನೆ ತರಗತಿ ಮಕ್ಕಳಿಗೆ ವಿಜ್ಞಾನದ ಅರಿವು ಮೂಡಿಸುವುದು ಮುಖ್ಯ ಎಂದು ತಿಳಿಸಿದರು.

ವಿಜ್ಞಾನ ಕಿಟ್‍ನಲ್ಲಿರುವ ಎಲ್ಲಾ ಅಂಶಗಳು ಮಕ್ಕಳಿಗೆ ಪ್ರಯೋಜನವಾಗಬೇಕು. ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪರಿಸ್ಥಿತಿ ಶೋಚನೀಯವಾಗಿದೆ. ವಿಜ್ಞಾನದ ವಿಷಯ ಕುರಿತು ಮಕ್ಕಳಿಗೆ ಪರಿಚಯಾತ್ಮಕವಾಗಿ ಬೋಧಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ. ಹಾಗಾಗಿ ವಿಜ್ಞಾನ ಕಿಟ್‍ನ್ನು ಜೋಪಾನವಾಗಿ ಸಂಗ್ರಹಿಸಿ ಕಲಿಕಾ ವರ್ಷಗಳಲ್ಲಿ ಮಕ್ಕಳಿಗೆ ಪೂರಕವಾಗುವಂತೆ ಬಳಸಬೇಕೆಂದು ವಿಜ್ಞಾನ ಶಿಕ್ಷಕರುಗಳಿಗೆ ಎಸ್.ನಾಗಭೂಷಣ್ ಕರೆ ನೀಡಿದರು.

ಐ.ಎಲ್.ಪಿ. ಮ್ಯಾನೇಜರ್ ಮಂಜುನಾಥ್ ಮಾತನಾಡಿ ಹನ್ನೊಂದು ಸಂಸ್ಥೆಗಳು ಒಟ್ಟುಗೂಡಿ ಚರ್ಚಿಸಿ ವಿಜ್ಞಾನ ಕಿಟ್ ವಿತರಣೆ ಹಾಗೂ ಶಿಕ್ಷಕರುಗಳಿಗೆ ಕಾರ್ಯಾಗಾರ ನಡೆಸಲು ತೀರ್ಮಾನಿಸಿದ್ದೇವೆ. ಸರ್ಕಾರಿ ಶಾಲೆಗಳ ಜೊತೆಗೆ ಅನುದಾನಿತ ಪ್ರೌಢಶಾಲೆಗಳ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕಿಟ್‍ಗಳನ್ನು ನೀಡಿದ್ದೇವೆ. ಪ್ರಾರಂಭದಲ್ಲಿ ತುಮಕೂರಿನಲ್ಲಿ ಐದು ನೂರು ಶಾಲೆಗಳಿಗೆ ವಿಜ್ಞಾನ ಕಿಟ್‍ಗಳನ್ನು ವಿತರಿಸಲಾಯಿತು. ಹಾವೇರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನೀಡಲಾಗಿದೆ. ಜಿಲ್ಲೆಯಲ್ಲಿ 317 ಪ್ರೌಢಶಾಲೆಗಳಲ್ಲಿನ ಮಕ್ಕಳಿಗೆ ಪ್ರಯೋಗದ ಮೂಲಕ ವಿಜ್ಞಾನದ ಮಹತ್ವ ತಿಳಿಸಬೇಕೆಂಬುದು ನಮ್ಮ ಉದ್ದೇಶ ಎಂದು ಹೇಳಿದರು.

ಡಯಟ್ ಉಪನ್ಯಾಸಕಿಯರುಗಳಾದ ಪೂರ್ಣಿಮ, ಲೀಲಾವತಿ, ಹೆಚ್.ಆರ್.ಸಿ. ಮುಖ್ಯಸ್ಥೆ ಗೀತ ಇವರುಗಳು ವೇದಿಕೆಯಲ್ಲಿದ್ದರು.

Tags :
Advertisement