For the best experience, open
https://m.suddione.com
on your mobile browser.
Advertisement

ಮೊದಲ ಬಾರಿಗೆ ವಿಧಾನಸೌಧದ ಮುಂಭಾಗದಲ್ಲಿ ಜನತಾ ದರ್ಶನ: ನಾಳೆ ಸಿಎಂ ನೇತೃತ್ವದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ

05:07 PM Feb 07, 2024 IST | suddionenews
ಮೊದಲ ಬಾರಿಗೆ ವಿಧಾನಸೌಧದ ಮುಂಭಾಗದಲ್ಲಿ ಜನತಾ ದರ್ಶನ  ನಾಳೆ ಸಿಎಂ ನೇತೃತ್ವದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ
Advertisement

ಸುದ್ದಿಒನ್, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಬಾರಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದೆ. ಈ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿಕೊಟ್ಟಿದೆ. ಇದೀಗ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜನತಾ ದರ್ಶನವನ್ನು ವಿಧಾನಸೌಧದಲ್ಲಿ ನಡೆಸಲಿದೆ.

Advertisement
Advertisement

ಇಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ. ನಾಳೆ ಬೆಂಗಳೂರಿಗೆ ಬಂದು ಜನತಾ ದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ಜನತಾ ದರ್ಶನ ನಡೆಸಲಿದ್ದು, ವಿಧಾನಸೌಧದ ಮುಂಭಾಗ ಜನರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿ, ಅಲ್ಲಿಯೇ ಪರಿಹಾರವನ್ನು ನೀಡಲಿದ್ದಾರೆ.

Advertisement

ಜನತಾ ದರ್ಶನ ಎಂದರೆ ರಾಜ್ಯದ ನಾನಾ ಭಾಗಗಳಿಂದ ಸಮಸ್ಯೆಗಳನ್ನು ಹೊತ್ತು ಜನ ಬರುತ್ತಾರೆ. ಹೀಗಾಗಿ ಈಗಾಗಲೇ ವಿಧಾನಸೌಧದಲ್ಲಿ ಸಿದ್ಧತೆ ನಡೆದಿದೆ. ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯಿಂದ ತಯಾರಿ‌ ಮಾಡಿಕೊಳ್ಳಲಾಗಿದೆ. ಜನ ಸ್ಪಂದನಾ ಕಾರ್ಯಕ್ರಮಕ್ಕೆ ಬೃಹತ್ ಟೆಂಟ್ ಹಾಕಲಾಗಿದೆ. 10 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 36 ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಕೌಂಟರ್ ಮಾಡಲಾಗಿದೆ.

Advertisement

ನಾಳೆಯ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಅರ್ಜಿಗಳನ್ನು ಪರಿಶೀಲನೆ ಮಾಡಲಿದ್ದಾರೆ. ಸಮಸ್ಯೆಗಳನ್ನು ಹೇಳಿಕೊಳ್ಳಲು ಜನ ತಮ್ಮ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕಾಗಿದೆ. ಇದು ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಎರಡನೇ ಜನಸ್ಪಂದನಾ ಕಾರ್ಯಕ್ರಮವಾಗಿದೆ. ಕಳೆದ ಬಾರಿ ಕೃಷ್ಣಾದಲ್ಲಿ ನಡೆಸಿದ್ದರು. ಆಗ 4,130 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಶೇ. 97ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

Advertisement
Tags :
Advertisement