ಟಿಕೆಟ್ ಕೊಡಿಸುವುದಾಗಿ 2 ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಜೋಶಿ ಬ್ರದರ್ ರಿಲೀಸ್..!
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರ ರಿಲೀಸ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಲೋಕಸಭಾ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್ ಜೋಶಿ ಹಾಗೂ ಎಸ್ ವಿ ವಿಜಯಲಕ್ಷ್ಮೀ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಇದೀಗ ಅವರ ಬಿಡುಗಡೆಗೆ ಕೋರ್ಟ್ ಸೂಚನೆ ನೀಡಿದೆ.
ಗೋಪಾಲ ಜೋಶಿ ಅವರ ವಿರುದ್ಧ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚೌಹಾಣ್ ಅವರ ಪತ್ನಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೇವಾನಂದ್ ಚೌವ್ಹಾಣ್ ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ಆದರೆ ಟಿಕೆಟ್ ಸಿಗುತ್ತದೆ ಎಂದು ಕೋಟ್ಯಾಂತರ ರೂಪಾಯಿ ನೀಡಿ ವಂಚನೆಗೆ ಒಳಗಾಗಿದ್ದರು ಎಂದು ದೂರು ದಾಖಲಾಗಿತ್ತು.
ಬಸವೇಶ್ವರ ನಗರದ ಠಾಣೆಯಲ್ಲಿ ದಾಖಲಾದ ದೂರನ್ನು ರದ್ದು ಪಡಿಸಬೇಕೆಂದು ಕೋರಿ ಜೋಶಿ ಸಹೊಇದರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಗೋಪಾಲ ಜೋಶಿ ಹಾಗೂ ಇತರೆರು ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಎಫ್ಐಆರ್ ರದ್ದುಪಡಿಸಬೇಕು ಮತ್ತು ಇವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆದೇಶ ಹೊರಡಿಸಿದೆ. ಈ ಮೂಲಕ ವಂವನೆ ಪ್ರಕರಣದಲ್ಲಿ ಕಸ್ಟಡಿಯಲ್ಲಿದ್ದ ಗೋಪಾಲ ಜೋಶಿ, ಸಹೋದರಿ ವಿಜಯಲಕ್ಷ್ಮೀ, ಅಜಯ್ ಜೋಶಿ ಅವರನ್ನು ಬಿಡುಗಡೆ ಮಾಡಲು ಕೋರ್ಟ್ ಸೂಚನೆ ನೀಡಿದ್ದು, ಕಸ್ಟಡಿಯಿಂದ ರಿಲೀಸ್ ಆಗುತ್ತಿದ್ದಾರೆ.