For the best experience, open
https://m.suddione.com
on your mobile browser.
Advertisement

ಕೇರಳ ಭೂಕಂಪ : ಅಮಿತ್ ಶಾ ಆರೋಪಕ್ಕೆ ಸಿಎಂ ಪಿಣರಾಯಿ ವಿಜಯನ್ ತಿರುಗೇಟು..!

09:13 PM Jul 31, 2024 IST | suddionenews
ಕೇರಳ ಭೂಕಂಪ   ಅಮಿತ್ ಶಾ ಆರೋಪಕ್ಕೆ ಸಿಎಂ ಪಿಣರಾಯಿ ವಿಜಯನ್ ತಿರುಗೇಟು
Advertisement

Advertisement

ಕೇರಳ ಈಗ ಅಕ್ಷರಶಃ ಸ್ಮಶಾನದಂತೆ ಆಗಿದೆ. ಭೂಕಂಪದಿಂದಾಗಿ 300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಇದರ ನಡುವೆ ಅಮಿತ್ ಶಾ ಹಾಗೂ ಸಿಎಂ ಪಿಣರಾಯಿ ವಿಜಯನ್ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಕೇಂದ್ರ ಸರ್ಕಾರ ಜುಲೈ 23ರಂದು ಮುನ್ನೆಚ್ಚರಿಕೆ ನೀಡಿದ್ದರು, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಮಿತ್ ಶಾ ಹೇಳಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾತಿಗೆ ಸಿಎಂ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ. ಭೂಕುಸಿತ ಪೀಡಿತ ವಯನಾಡಿಗೆ ಕೇಂದ್ರ ಸರ್ಕಾರ ಒಮ್ಮೆಯೂ ಹವಮಾನ ವರದಿ ನೀಡಲಿಲ್ಲ. ರೆಡ್ ಅಲರ್ಟ್ ಕೂಡ ನೀಡಲಿಲ್ಲ. ಹವಮಾನ ಇಲಾಖೆಯ ಎಚ್ಚರಿಕೆಗಳ ಹಿರತಾಗಿಯೂ ಭೂಕುಸಿತಕ್ಕೂ ಮುನ್ನ ವಯನಾಡಿಗೆ ಯಾವುದೇ ರೆಡ್ ಅಲರ್ಟ್ ಗಳನ್ನು ನೀಡಿರಲಿಲ್ಲ. ವಯನಾಡಿನಲ್ಲಿ 500 ಮಿಲಿ ಮೀಟರ್ ಗೂ ಹೆಚ್ಚು ಮಳೆಯಾಗಿದ್ದು, ಭವಿಷ್ಯ ನುಡಿದಿದ್ದಕ್ಕಿಂತ ತೀವ್ರ ನಷ್ಟ ಅನುಭವಿಸಿದಂತೆ ಆಗಿದೆ. ಇದು ಆರೋಪ ಮಾಡುವ ಸಮಯವಲ್ಲ. ಇದುವರೆಗೂ ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಇನ್ನು ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ.

Advertisement

ಜುಲೈ 18ರಂದು ಕೇರಳದ ಪಶ್ಚಿಮ ಕರಾವಳಿಯು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಅನುಭವಿಸುತ್ತದೆ ಎಂದು ಮುನ್ಸೂಚನೆ ನೀಡಲಾಗಿತ್ತು. ಜುಲೈ 25ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಜುಲೈ 23ರಂದು ಎನ್‌ಡಿಆರ್‌ಎಫ್‌ನ 8 ತಂಡಗಳನ್ನು ಈ ಪ್ರದೇಶಕ್ಕೆ ಕಳುಹಿಸಲಾಗಿತ್ತು ಎಂದು ಅಮಿತ್ ಶಾ ಹೇಳಿದ್ದರು.

Tags :
Advertisement