For the best experience, open
https://m.suddione.com
on your mobile browser.
Advertisement

ಅಗ್ನಿವೀರ್ ಯೋಜನೆ ರದ್ದುಗೊಳಿಸಲು ಖರ್ಗೆ ಆಗ್ರಹ..!

05:34 PM Jul 01, 2024 IST | suddionenews
ಅಗ್ನಿವೀರ್ ಯೋಜನೆ ರದ್ದುಗೊಳಿಸಲು ಖರ್ಗೆ ಆಗ್ರಹ
Advertisement

ನವದೆಹಲಿ: ರಾಜ್ಯಸಭಾ ಅಧಿವೇಶನದಲ್ಲಿ ಅಗ್ನಿವೀರ್ ಯೋಜನೆ ಸದ್ದು ಮಾಡಿದೆ. ಇಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಒತ್ತಾಯಿಸಿದ್ದಾರೆ. ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

Advertisement

ಅಗ್ನುವೀರ್ ನಂತಹ ಯೋಜಿತವಲ್ಲದ ಮತ್ತು ತುಘಲಕಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಯುವಕರ ನೈತಿಕ ಸ್ಥೈರ್ಯವನ್ನು ಛಿದ್ರಗೊಳಿಸಲಾಗಿದೆ. ಹೀಗಾಗಿ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ನಾನು ಒತ್ತಾಯಿಸುತ್ತೇ ಎಂದಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದಾಗ ಈ ವಿಚಾರ ಪ್ರಸ್ತಾಪಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯ ಸಂವಿಧಾನವನ್ನು ಸಮಸ್ಯೆಯಾಗಿಸಿದ ಮೊದಲ ಚುನಾವಣೆಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಂವಿಧಾನ ಇದ್ದಾಗ ಮಾತ್ರ ಚುನಾವಣೆ ನಡೆಸಬಹುದು. ಕೆಲವರು ಸಂವಿಧಾನದ ಬಗ್ಗೆ ಮಾತನಾಡುವುದನ್ನು ವಿರೋಧಿಸುತ್ತಾರೆ. ಅದನ್ನು ಚುನಾವಣಾ ವಿಷಯವಾಗಿ ಮಾಡುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು. ಕಳೆದ ವರ್ಷದಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ ಆ ರಾಜ್ಯಕ್ಕೆ ಪ್ರಧಾನಿ ಯಾಕೆ ಭೇಟಿ ನೀಡಲಿಲ್ಲ..? ಪ್ರಧಾನಿ ಮೋದಿಯವರು ಚುನಾವಣಾ ಸಮಯದಲ್ಲಿ ತಮ್ಮ ಭಾಷಣದ ಮೂಲಕ ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಖರ್ಗೆ ಅವರು ಈ ಹಿಂದರ ಯಾವ ಪ್ರಧಾನಿಯೂ ಈ ರೀತಿ ಮಾಡಿರಲಿಲ್ಲ ಎಂದಿದ್ದಾರೆ.

Advertisement

ರಕ್ಷಣಾ ಆಧುನೀಕರಣದ ಭಾಗವಾಗಿ ಜೂನ್ 2022ರಲರಲಿತರಲಾದ ಅಗ್ನಿಪಥ್ ಯೋಜನೆಯಡಿ ಯುವಕರನ್ನು 4 ವರ್ಷಗಳವರೆಗೆ ನೇಮಿಸಿಕೊಳ್ಳಲಾಗುತ್ತದೆ. ಅವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ. ನಾಲ್ಕು ವರ್ಷಗಳ ಬಳಿಕ ಶೇಕಡ 25 ರಷ್ಡು ಅಗ್ನಿವೀರ್ ಗಳನ್ನು ಉಳಿಸಿಕೊಳ್ಳಲಾಗುತ್ತದೆ. ಉಳಿದವರನ್ನು ಕರ್ತವ್ಯದಿಂದ ತೆಗೆದುಹಾಕಲಾಗುತ್ತದೆ. ಬಳಿಕ ಅಗ್ನಿಪತ್ ನಲ್ಲಿ ಸೇವೆ ಸಲ್ಲಿಸಿದವರು ಸೇನೆಗೆ ಸಂಬಂಧಿಸಿದಂತೆ ಕೆಲಸಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂಬ ಮಾತಿದೆ.

Tags :
Advertisement