Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ : ಮುಖ್ಯಮಂತ್ರಿ ಸಿದ್ದರಾಮಯ್ಯ

01:27 PM Oct 12, 2024 IST | suddionenews
Advertisement

 

Advertisement

ಮೈಸೂರು, ಅಕ್ಟೋಬರ್ 12 : ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Advertisement

ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ತಿಳಿಸಿದರು.

Advertisement
Tags :
bengaluruChief Minister SiddaramaiahchitradurgadasaradecentKillingprotectingsuddionesuddione newssymbolಚಿತ್ರದುರ್ಗದಸರಾದುಷ್ಟರ ಸಂಹಾರಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಶಿಷ್ಟರ ರಕ್ಷಣೆಸಂಕೇತಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article