Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

04:08 PM Dec 25, 2023 IST | suddionenews
Advertisement

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಸೂಚನೆ ಮೇರೆಗೆ ಕರ್ನಾಟಕ ವಿಧಾನಪರಿಷತ್ ಗೆ, ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ವಿಪಕ್ಷ ನಾಯಕನಾಗಿ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

 

ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ. ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.

Advertisement

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಮತ್ತು ಕೆಲವು ಮೋರ್ಚಾಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದರು. ಇದೀಗ ಎರಡನೇ ಹಂತದಲ್ಲಿ ವಿಧಾನ ಸಭೆ ಮತ್ತು ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.

Advertisement
Tags :
appointedKarnataka Vidhan ParishadKota Srinivasa PujariLeader of Oppositionಕರ್ನಾಟಕ ವಿಧಾನ ಪರಿಷತ್ಕೋಟಾ ಶ್ರೀನಿವಾಸ ಪೂಜಾರಿನೇಮಕಬೆಂಗಳೂರುವಿಪಕ್ಷ ನಾಯಕ
Advertisement
Next Article