150 ಕೋಟಿ ಆಮಿಷದ ಕೇಸನ್ನ ಸಿಬಿಐಗೆ ವಹಿಸಲಿ : ವಿಜಯೇಂದ್ರರಿಂದ ಆಗ್ರಹ..!
ಬೆಳಗಾವಿ: ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆಯೊಂದನ್ನ ಹೊರಡಿಸಿದ್ದರು. ಅದರಲ್ಲಿ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ವಿಜಯೇಂದ್ರ ಅವರು 150 ಕೋಟಿ ಹಣದ ಆಮಿಷ ವೊಡ್ಡಿದ್ದರು ಎಂಬುದು. ಇದೀಗ ಇದೇ ವಿಚಾರ ಅಧಿವೇಶನದಲ್ಲೂ ಚರ್ಚೆಗೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಈ ಬಗ್ಗೆ ಸವಾಲು ಹಾಕಿದ್ದಾರೆ. ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಸವಾಲಾಕಿದ್ದಾರೆ.
ಸದನದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ ಅವರು, ಪ್ರಿಯಾಂಕ್ ನನ್ನ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ಹಿಂದಿನ ಅಲ್ಪಸಂಖ್ಯಾತರ ಆಯೋಗದ ಹೆಸರು ಹೇಳಿ ನನ್ನ ಮೇಲೆ ಆರೋಪ ಮಾಡಲಾಗಿದೆ. ವಕ್ಫ್ ಆಸ್ತಿ ದುರುಪಯೋಗ ಕುರಿತು ಮಾಣಿಪ್ಪಾಡಿ ವರದಿ ನೀಡಿದ್ದರು. ನಂತರ ಉಪಲೋಕಾಯುಕ್ತ ನ್ಯಾ.ಆನಂದ್ ಅವರು ವರದಿ ಕೊಟ್ಟಿದ್ದರು. 2016ರ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಜ್ತರ ವರದಿಯನ್ನು ಮುಚ್ಚಿ ಹಾಕಿದರು.
ಅಲ್ಪಸಂಖ್ಯಾತ ಆಯೋಗದ ಹಿಂದಿನ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತ್ತು. ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲು ಹಾಕುತ್ತೇನೆ. 150 ಕೋಟಿ ರೂಪಾಯಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜೊತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ. ಹಗರಣಗಳಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸದನದಲ್ಲಿ ಸವಾಲು ಹಾಕಿದ್ದಾರೆ.