For the best experience, open
https://m.suddione.com
on your mobile browser.
Advertisement

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

07:14 PM May 11, 2024 IST | suddionenews
ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ
Advertisement

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ ಶಾಲೆಗಳಲ್ಲಿ ಪ್ರತಿ ವರ್ಷವೂ ಶುಲ್ಕದ ದರ ಏರಿಕೆಯಾಗುತ್ತಲೇ ಇರುತ್ತದೆ. ಇದು ಪೋಷಕರ ನಿದ್ದೆ ಕೆಡಿಸುತ್ತದೆ. ಹೀಗಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

Advertisement

ಈ ಬಗ್ಗೆ ಮಾತನಾಡಿರುವ ಮಧು ಬಂಗಾರಪ್ಪ, 'ಖಾಸಗಿ ಶಾಲೆಗಳುಗೆ ಒಂದು ಸಲಹೆ ನೀಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಫೀಸ್ ತೆಗೆದುಕೊಳ್ಳಬೇಕು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅಕ್ರಮವಾಗಿ ಫೀಸ್ ತೆಗೆದುಕೊಂಡರೆ, ಹೆಚ್ಚಿನ ಶುಲ್ಕವನ್ನು ಪೋಷಕರಿಂದ ತೆಗೆದುಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ' ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದೇ ವೇಳೆ ಸರ್ಕಾರಿ ಶಾಲೆಗಳ ಬಗ್ಗೆ ಮಾತನಾಡಿ, ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ನಾನು ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಇದಕ್ಕೆಲ್ಲಾ ಸ್ವಲ್ಪ ಸಮಯ ಬೇಕಾಗುತ್ತದೆ. ಇದು ಪುಣ್ಯದ ಕೆಲಸ, ಹಂತ ಹಂತವಾಗಿ ಮಾಡುತ್ತೇನೆ ಎಂದಿದ್ದಾರೆ.

Advertisement

ಇದೇ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಏಕೈಕ ವಿದ್ಯಾರ್ಥಿನಿ ಬಾಗಲಕೋಟೆಯ ಅಂಕಿತಾ ಶಿಕ್ಷಣದ ಬಗ್ಗೆಯೂ ಮಾತನಾಡಿದ್ದಾರೆ. 'ಏನಾದರೂ ಸಹಾಯ ಬೇಕು ಎಂದರೆ ಕೇಳು ಎಂಬುದಾಗಿ ಅಂಕಿತಾಗೆ ಹೇಳಿದ್ದೇನೆ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಆಕೆಗೆ ಸಿಗುತ್ತವೆ. ಉನ್ನತ ಶಿಕ್ಷಣಕ್ಕೆ ಬೇಕಾದರೆ ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ' ಎಂದಿದ್ದಾರೆ.

Advertisement

Advertisement
Advertisement
Advertisement
Tags :
Advertisement