For the best experience, open
https://m.suddione.com
on your mobile browser.
Advertisement

ಬಿಜೆಪಿ - ಜೆಡಿಎಸ್ ತೆಕ್ಕೆಗೆ ಮಂಡ್ಯ ನಗರಸಭೆ : ವಾಮಮಾರ್ಗದಲ್ಲಿ ಅಧಿಕಾರ ಹಿಡಿದರು ಎಂದು ಸಿಡಿದೆದ್ದ ಕಾಂಗ್ರೆಸ್ ನಾಯಕ..!

03:52 PM Aug 28, 2024 IST | suddionenews
ಬಿಜೆಪಿ   ಜೆಡಿಎಸ್ ತೆಕ್ಕೆಗೆ ಮಂಡ್ಯ ನಗರಸಭೆ   ವಾಮಮಾರ್ಗದಲ್ಲಿ ಅಧಿಕಾರ ಹಿಡಿದರು ಎಂದು ಸಿಡಿದೆದ್ದ ಕಾಂಗ್ರೆಸ್ ನಾಯಕ
Advertisement

ಮಂಡ್ಯ: ಇಂದು ಮಂಡ್ಯ ನಗರಸಭೆ ಚುನಾವಣೆ ನಡೆದಿದೆ. ಫೈನಲಿ ಬಿಜೆಪಿ ಹಾಗೂ ಜೆಡಿಎಸ್ ಅಬವ್ಯರ್ಥಿಯೇ ಗೆಲುವು ಸಾಧಿಸಿದ್ದಾರೆ. ಆದರೆ ಇಂದು ನಗರಸಭೆ ಆವರಣದಲ್ಲಿ ದೊಡ್ಡ ಹೈಡ್ರಾಮವೇ ನಿರ್ಮಾಣವಾಗಿತ್ತು. ಕುಮಾರಸ್ವಾಮಿ ನಗರಸಭೆ ಬಳಿ ಬರುತ್ತಿದ್ದಂತೆ ಸಾಕಷ್ಟು ಗದ್ದಲ ಶುರುವಾಗಿತ್ತು. ಮಾತಿನ ಚಕಮಕಿಯೂ ನಡರಯಿತು. ಕುಮಾರಸ್ವಾಮಿ ಅವರ ವಾಹನವನ್ನು ಮಾತ್ರ ಒಳಗೆ ಬಿಟ್ಟು, ಸದಸ್ಯರ ವಾಹನವನ್ನು ಪೊಲೀಸರು ತಡೆಹಿಡಿದಿದ್ದರು‌. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

Advertisement
Advertisement

ತೀವ್ರ ಕುತೂಹಲ ಮೂಡಿಸಿದ್ದ ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದೆ. ಎರಡನೇ ಅವಧಿಗೆ ಮಂಡ್ಯ ನಗರಸಭೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾದರು. ಮಂಡ್ಯ ನಗರಸಭೆ ಬಿಜೆಪಿ-ಜೆಡಿಎಸ್ ಪಾಲಾಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಆದರೆ ಕಾಂಗ್ರೆಸ್ ಸದಸ್ಯರು ಮಾತ್ರ ಕೆರಳಿ ಕೆಂಡವಾಗಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದೆ ಎಂದು ಕಾಂಗ್ರೆಸ್ ಶಾಸಕ ರವಿ ಗಾಣಿಗ ಆರೋಪಿಸಿದರು. ಇದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕ ರವಿ ಗಾಣಿಗ ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ‌. ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು..? ಮತದಾನದ ವೇಳೆಯೂ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮಿಷವೊಡ್ಡಿದ್ದಾರೆ. ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ರಾಜಕೀಯ ಬೆಳವಣಿಗೆ ಗಮನಿಸಿ, ನಾನು ಬರಬೇಕಾಯಿತು. ಕ್ಯಾಬಿನೆಟ್ ಸಭೆ ಬಿಟ್ಟು ಪ್ರಧಾನಮಂತ್ರಿ ಅನುಮತಿ ಪಡೆದು, ಮತದಾನದಲ್ಲಿ ಭಾಗವಹಿಸಿದ್ದೇನೆ ಎಂದರು.

Advertisement

Advertisement
Tags :
Advertisement