ನಾಳೆ ಬಿಜೆಪಿ ಸೇರಲಿದ್ದಾರೆ ಶಾಸಕ ಗಾಲಿ ಜನಾರ್ದನ ರೆಡ್ಡಿ
ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳು ಚುನಾವಣೆಯ ಪ್ರಚಾರದಲ್ಲಿ ಬ್ಯುಸಿಯಾಗಿವೆ. ಇದರ ನಡುವೆ ಬಿಜೆಪಿ, ಪಕ್ಷೇತರ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿಗೆ ಗಾಳ ಹಾಕಿದೆ. ಎಲ್ಲೆಲ್ಲಿ ಗೆಲ್ಲುವ ಸಾಧ್ಯತೆ ಇದೆಯೋ ಅಲ್ಲೆಲ್ಲಾ ಹೆಚ್ಚಿನ ಪ್ರಯತ್ನ ಪಡಲಾಗುತ್ತಿದೆ. ಇದೀಗ ಪಕ್ಷೇತರವಾಗಿ ಗೆದ್ದ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಲು ಸಮಯ ಫಿಕ್ಸ್ ಆಗಿದೆ. ನಾಳೆಯೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.
ಜನಾರ್ದನ ರೆಡ್ಡಿಯವರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ಹೈಕಮಾಂಡ್ ಶ್ರೀರಾಮುಲುಗೆ ಮಾತುಕತೆ ನಡೆಸಲು ತಿಳಿಸಿತ್ತು. ಬಳಿಕ ದೆಹಲಿಗೆ ಕರೆಸಿಕೊಂಡು ಖುದ್ದು ಅಮಿತ್ ಅವರೇ ಮಾತನಾಡಿದ್ದಾರೆ. ಅಂತಿಮ ಸುತ್ತಿನ ಮಾತುಕತೆಯೂ ನಡೆದಿದ್ದು, ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾದರ್ನ ರೆಡ್ಡಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಇಂದು (ಮಾರ್ಚ್ 24) ಸಂಜೆ ಬೆಂಗಳೂರಿನಲ್ಲಿ ಕರೆದಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಪಾರಿಜಾತ ಅಪಾರ್ಟ್ಮೆಂಟ್ ನಲ್ಲಿ ಕೆಆರ್‌ಪಿಪಿ ಪಕ್ಷದ ಮುಖಂಡರ ಜತೆ ಸಭೆ ನಡೆಯಲಿದ್ದು, ಸಭೆ ಬಳಿಕ ಸಂಜೆ 5 ಗಂಟೆಗೆ ರೆಡ್ಡಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಆಹ್ವಾನದ ಮೇರೆಗೆ ಕೆಲವು ದಿನಗಳ ಹಿಂದೆ ದೆಹಲಿಗೆ ತೆರಳಿದ್ದರು. ಅಲ್ಲಿ ಶಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದಲ್ಲಿ ಬಗ್ಗೆ ಮಾತುಕತೆ ನಡೆಸಿದ್ದರು. ಈ ವೇಳೆ ಬಿಜೆಪಿಗೆ ಸೇರುವಂತೆ ರೆಡ್ಡಿಗೆ ಆಹ್ವಾನ ನೀಡಿದ್ದಾರೆ. ಅಲ್ಲದೇ ಕೆಆರ್‌ಪಿಪಿ ಪಕ್ಷವನ್ನು ವಿಲೀನಗೊಳಿಸುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.