Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

12:06 PM Apr 28, 2024 IST | suddionenews
Advertisement

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ ಪ್ರವಾಸವನ್ನು ಮುಂದುವರೆಸಲಿದ್ದಾರೆ.

Advertisement

ಬೆಳಗಾವಿ, ಶಿರಸಿ, ದಾವಣಗೆರೆಯಲ್ಲಿ ಇಂದು ಮತ್ತು ನಾಳೆ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ಬೆಳಗಾವಿಗೆ ಬಂದಿಳಿದಿದ್ದು, ಬೆಳಗಾವಿಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಜನರನ್ನುದ್ದೇಶಿ ಮಾತನಾಡಿದ ಮೋದಿ, ಕಾಂಗ್ರೆಸ್​ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಹಾಳು ಮಾಡಿದೆ. ಕಾಂಗ್ರೆಸ್​ ವೋಟ್​ ಬ್ಯಾಂಕ್​ ರಾಜಕಾರಣಕ್ಕಾಗಿ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್​ ದೇಶದ ರಾಜ-ಮಹರಾಜರಿಗೆ ಅಪಮಾನ ಮಾಡುತ್ತಿದೆ. ​ ಔರಂಗಜೇಬನನ್ನು ಗುಣಗಾನ ಮಾಡುವ ಪಕ್ಷದೊಂದಿಗೆ ಕಾಂಗ್ರೆಸ್​ ಘಟಬಂದನ್​ ಮಾಡಿಕೊಂಡಿದೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಪಮಾನ ಮಾಡಲಾಯಿತು. ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆಯಾಯಿತು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯಾಯಿತು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿತು. ಈ ಸ್ಫೋಟವನ್ನು ಕಾಂಗ್ರೆಸ್​ ಸಿಲೆಂಡರ್ ಬ್ಲಾಸ್ಟ್​ ಎಂದಿತು. ಕಾಂಗ್ರೆಸ್ ಮತಕ್ಕಾಗಿ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಬರಬಾದ್​ ಆಗಲಿದೆ. ದೇಶವಿರೋಧಿ ಪಿಎಫ್​ಐ ಸಂಘಟನೆ ಕಾಂಗ್ರೆಸ್​ಗೆ ಬೆಂಬಲ ನೀಡಿದೆ ಎಂದು ಕಿಡಿಕಾರಿದರು. ​ ​​

Advertisement
Tags :
bengaluruchitradurgadavanagereNarendra modiSirsisuddionesuddione newsಚಿತ್ರದುರ್ಗದಾವಣಗೆರೆಬೆಂಗಳೂರುಬೆಳಗಾವಿಮೋದಿ ಮತಬೇಟೆಶಿರಸಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article