ರಾಜ್ಯದಲ್ಲಿ 20 ಲಕ್ಷಕ್ಕೂ ಅಧಿಕ BPL ಕಾರ್ಡ್ ರದ್ದು : ಸಚಿವ ಪರಮೇಶ್ವರ್ ಹೇಳಿದ್ದೇನು..?
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ನಿರ್ಧಾರ ಮಾಡಿದೆ. ಮೊದಲಿನಿಂದಲೂ ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಚಿಂತನೆ ನಡೆಸಿದೆ. ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ ಅನಧಿಕೃತ ಬಿಪಿಎಲ್ ಕಾರ್ಡ್ ಹೊಂದಿರುವವರ ಪತ್ತೆಗೆ ಸರ್ಕಾರ ಚಿಂತನೆ ನಡೆಸಿದೆ.
ಮೂಲಗಳ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸುಮಾರು 20 ಲಕ್ಷ ಅನಧಿಕೃತ ಕಾರ್ಡ್ ಗಳನ್ನು ರದ್ದು ಪಡಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್ ಗಳು ವಿತರಣೆಯಾಗಿದೆ. ಆದರೆ ರಾಷ್ಟ್ರೀಯ ಆಹಾರ ಭದ್ರತೆಯ ಇಲಾಖೆಯ ಪ್ರಕಾರ ಬಿಎಪಿಎಲ್ ಕಾರ್ಡ್ ದಾರರ ಸಂಖ್ಯೆ 1.03 ಕೋಟಿ ಇರಬೇಕಿದೆ. ನಕಲಿ ಬಿಪಿಎಲ್ ಕಾರ್ಡುದಾರರಿಂದ ಗ್ಯಾರಂಟಿ ಯೋಜನೆಗಳಿಗೆ ಪೆಟ್ಟು ಬೀಳುತ್ತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿರುವವರ ಕಾರ್ಡ್ ಗಳನ್ನು ರದ್ದು ಪಡಿಸಿ ಎಂದು ಸೂಚನೆ ನೀಡಿದ್ದಾರೆ.
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಟುಂಬ ಸಮೇತ ಅಮೆರಿಕಾಗೆ ಹೋಗಿದ್ದು, ಅಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಮಾತನಾಡಿದ್ದಾರೆಂದು ತಿಳಿದು ಬಂದಿದ್ದು, ಆ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಬಿಪಿಎಲ್ ಕಾರ್ಡನ್ನು ಕಡಿತ ಮಾಡುತ್ತಿಲ್ಲ. ಆದರೆ ತೆರಿಗೆ ಪಾವತಿ ಮಾಡುತ್ತಿರುವವರು ಕಾರ್ಡ್ ಪಡೆಯಲು ಅರ್ಹರಲ್ಲ ಎಂಬುದು ನಿಯಮದಲ್ಲಿದೆ. ಸುಳ್ಳು ದಾಖಲೆ ಸಲ್ಲಿಸಿ ಕಾರ್ಡ್ ಪಡೆದಿರುವುದು ತಪ್ಪಲ್ಲವೆ ಎಂದು ಪ್ರಶ್ನೆ ಮಾಡಿದ್ದಾರೆ.