ಇಂದು ಹೈಕೋರ್ಟ್ ನಲ್ಲಿ ಮೂಡಾ ಪ್ರಕರಣ: ಏನಾಗಲಿದೆ ಕೇಸ್..?
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿರುವ ಸಂಬಂಧ ದೂರುದಾರರು ಅಧಿಕೃತವಾಗಿ ಹೈಕೋರ್ಟ್ ಗೆ ತೆರಳಿ ರಾಜ್ಯಪಾಲರ ಆದೇಶದ ಪ್ರತಿಯನ್ನು ನೀಡಲಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಅವರು ಕೂಡ ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಕೊಟ್ಟ ನಡೆಯನ್ನು ಹೈಕೋರ್ಟ್ ನಲ್ಲಿ ಸಿಎಂ ಪ್ರಶ್ನೆ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಲಿರುವ ಅರ್ಜಿಯಲ್ಲಿ 20 ಅಂಶಗಳನ್ನು ಪ್ರಸ್ತಾಪ ಮಾಡಲಿದ್ದಾರೆ.
ರಾಜ್ಯಪಾಲರು ಕಾನೂನು ಹಾಗೂ ಸಂವಿಧಾನದ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಎಸ್ಓಪಿ ನಿಯಮ ಪಾಲನೆ ಮಾಡಿಲ್ಲ. ಎಸ್ಓಪಿ ಬಗ್ಗೆ ರಾಜ್ಯಪಾಲರಿಗೆ ಅರಿವಿಲ್ಲ. ಕೇಂದ್ರ ಸರ್ಕಾರ ಮಾಡಿರುವ ಹೊಸ ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ. ಇದೊಂದು ಸಿವಿಲ್ ಮೊಕದ್ದಮೆಯೇ ಹೊರತು ಕ್ರೈಂ ಅಲ್ಲ. ಮೂಡಾದಲ್ಲಿ ಪಡೆದ ನಿವೇಶನಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದು ನನ್ನ ಪತ್ನಿಗೆ ಸಹೋದರರಿಂದ ಬಂದ ಗಿಫ್ಟ್. ನನ್ನ ಪತ್ನಿಯ ಆಸ್ತಿಯನ್ನು ಮೂಡಾ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿದ್ದಾರೆ. ಅದಕ್ಕೆ 14 ನಿವೇಶನಗಳನ್ನು ಪರ್ಯಾತವಾಗಿ ನೀಡಿದ್ದಾರೆ.
ಇದು ಎಲ್ಲಾ ಪ್ರಕ್ರಿಯೆ ನಡೆದಿರುವುದು ಬಿಜೆಪಿಯ ಅಧಿಕಾರಾವಧಿಯಲ್ಲಿ. ಇಂತಹ ಆರೋಪ ಬಂದ ತಕ್ಷಣ ಒನ್ ಮ್ಯಾನ್ ಕಮಿಷನ್ ನೇಮಕ ಮಾಡಿದ್ದೇವೆ. ಕಮಿಷನ್ ತನಿಖೆ ಮಾಡ್ತಿದೆ. ನ್ಯಾಯಾಂಗ ತನಿಖೆಯ ಸಮಿತಿ ಮಾಹಿತಿ ಸಹ ರಾಜ್ಯಪಾಲರು ಪಡೆದಿಲ್ಲ. ದೂರುದಾರರ ಬಗ್ಗೆ ಹಲವು ಅನುಮಾನಗಳಿವೆ. ಪ್ರದೀಪ್ ಜೆಡಿಎಸ್ ವಕ್ತಾರ. ಅಬ್ರಹಾಂ ಈ ಹಿಂದೆ ಹಲವು ದೂರುಗಳನ್ನು ನೀಡಿದರು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿಲ್ಲ. ಒಬ್ಬ ಅಧಿಕಾರಿಯನ್ನು ಬ್ಲಾಕ್ ಮೇಲ್ ಮಾಡಿದ ಆರೋಪ ಆತನ ಮೇಲಿದೆ ಎಂಬ ಹಲವು ಅಂಶಗಳನ್ನು ಕೋರ್ಟ್ ಮುಂದೆ ಇಡಲಿದ್ದಾರೆ.