For the best experience, open
https://m.suddione.com
on your mobile browser.
Advertisement

ಮೂಡಾ ಗೋಲ್ಮಾಲ್ ವಿಚಾರ : ಸಿಎಂ ₹4,000 ಕೋಟಿ ಗುಳುಂ : ಆರ್ ಅಶೋಕ್ ವಾಗ್ದಾಳಿ..!

12:36 PM Jul 02, 2024 IST | suddionenews
ಮೂಡಾ ಗೋಲ್ಮಾಲ್ ವಿಚಾರ   ಸಿಎಂ ₹4 000 ಕೋಟಿ ಗುಳುಂ   ಆರ್ ಅಶೋಕ್ ವಾಗ್ದಾಳಿ
Advertisement

Advertisement

ಬೆಂಗಳೂರು: ಮೂಡಾ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್, ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Advertisement

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ. ಗೋಲ್ಮಾಲ್ ಸಿಎಂ @siddaramaiah ನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ?.

1.) ಗೋಲ್ಮಾಲ್ ಸಿಎಂ @siddaramaiah ನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?

2.) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?

3.) 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?

4.) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?

5.)ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?

6.) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?

7.) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

Advertisement
Tags :
Advertisement